2017-18 ಅವಧಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 17.6ರಷ್ಟು ವೃದ್ಧಿ
ಮಾರ್ಚ್ ತಿಂಗಳ ಅಂತ್ಯಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 26. 91 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಬೆಂಗಳೂರು : ಮಾರ್ಚ್ ತಿಂಗಳ ಅಂತ್ಯಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 26. 91 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಈ ವಿಮಾನ ನಿಲ್ದಾಣದಿಂದ ಸಾಗಿದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 17. 6 ರಷ್ಟು ವೃದ್ಧಿಯಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ತಿಳಿಸಿದೆ.
ಆರ್ಥಿಕ ವರ್ಷದ ವಾರ್ಷಿಕ ಅಂಕಿಅಂಶಗಳನ್ನು ಘೋಷಿಸಿದ ಬಿಐಎಎಲ್, 12 ತಿಂಗಳ ಅವಧಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಹಲವಾರು ದಾಖಲೆಗಳಿಗೆ ಸಾಕ್ಷಿಯಾಗಿದೆ. 2018 ಫೆಬ್ರವರಿ 19 ರ ವೇಳೆಗೆ ದಾಖಲೆಯ 91, 339 ಪ್ರಯಾಣಿಕರು ಈ ವಿಮಾನ ನಿಲ್ದಾಣದ ಮೂಲಕ ಬೇರೆಡೆಗೆ ಪ್ರಯಾಣಿಸಿದ್ದಾರೆ.
ಮಾ.17 2018 ರ ವೇಳೆಗೆ ದಿನವೊಂದಕ್ಕೆ 664 ಎಟಿಎಂಗಳನ್ನು ಬಳಸಲಾಗಿದೆ. 150 ಮಿಲಿಯನ್ ಪ್ರಯಾಣಿಕರು ವಿಮಾನ ನಿಲ್ದಾಣ ಮೂಲಕ ಸಾಗಿದ್ದಾರೆ. ಈ ವರ್ಷದಲ್ಲಿ ಮಾರ್ಚ್ ದಟ್ಟಣೆಯ ವರ್ಷವಾಗಿದ್ದು, 2, 549, 523 ಪ್ರಯಾಣಿಕರನ್ನು ವಿಮಾನ ನಿಲ್ದಾಣ ನಿರ್ವಹಣೆ ಮಾಡಿದೆ . ದೇಶಿಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 19.8 ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇ. 6 ರಷ್ಟು ವೃದ್ದಿಯಾಗಿರುವುದಾಗಿ ಬಿಐಎಎಲ್ ಹೇಳಿದೆ.
2018-19 ರ ಆರ್ಥಿಕ ವರ್ಷದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಮೂಲಸೌಕರ್ಯ ಒದಗಿಸಲಾಗಿದ್ದು, ಪ್ರಯಾಣಿಕರ ಸಂಖ್ಯೆಯಲ್ಲಿ ಮತ್ತಷ್ಟು ವೃದ್ದಿಯಾಗುವ ಸಾಧ್ಯತೆ ಇದೆ ಎಂದು ಬಿಐಎಲ್ ಸಿಇಒ ಹರಿ ಮಾರರ್ ತಿಳಿಸಿದ್ದಾರೆ.
ಎರಡನೇ ರನ್ ವೇ ಈ ವರ್ಷದ ಮಧ್ಯಭಾಗದಿಂದ ಆರಂಭಗೊಳ್ಳಲಿದ್ದು, 2019ರಿಂದ ರನ್ ವೇ ಕಾರ್ಯಾರಂಭ ಮಾಡಲಿದೆ. 2021 ರೊಳಗೆ ಎರಡನೇ ಟರ್ಮಿನಲ್ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಎರಡು ಹಂತದ ಟರ್ಮಿನಲ್ ಕೆಲಸ ಪೂರ್ಣಗೊಂಡರೆ 65 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯವನ್ನು ಕಾಯ್ದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


