ಬೆಂಗಳೂರು: ರಬ್ಬರ್ ಬಲೂನ್ ನುಂಗಿ 2 ವರ್ಷದ ಬಾಲಕ ಸಾವು
ಮನೆಯ ಬಳಿ ಆಟವಾಡುತ್ತಿದ್ದ 2 ವರ್ಷದ ಮಗುವೊಂದು ಆಕಸ್ಮಾತ್ ಬಲೂನ್ ನುಂಗಿ ಸಾವನ್ನಪ್ಪಿರುವ ಘಟನೆ ನಗರದ ಹುಳಿಮಾವಿನ ಬಳಿಯ ಕಮ್ಮನಹಳ್ಳಿಯಲ್ಲಿ ನಡೆದಿದೆ. ...ಕ

Published On :
ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ 2 ವರ್ಷದ ಮಗುವೊಂದು ಆಕಸ್ಮಾತ್ ಬಲೂನ್ ನುಂಗಿ ಸಾವನ್ನಪ್ಪಿರುವ ಘಟನೆ ನಗರದ ಹುಳಿಮಾವಿನ ಬಳಿಯ ಕಮ್ಮನಹಳ್ಳಿಯಲ್ಲಿ ನಡೆದಿದೆ.
ಎರಡು ವರ್ಷದ ನವಾಜ್ ಬಲೂನ್ ನುಂಗಿ ಸಾವನ್ನಪ್ಪಿದ ರ್ದುದೈವಿ ಬೆಳಗ್ಗೆ 9.30 ರ ವೇಳೆ ಮನೆ ಬಳಿ ಆಟವಾಡುತ್ತಿದ್ದ. ಈ ವೇಳೆ ಗಾಳಿ ತುಂಬಿದ್ದ ಬಲೂನ್ ಒಡೆದು ಹೋಗಿದೆ, ಆ ಬಲೂನ್ ನ್ನು ನವಾಜ್ ನುಂಗಿ ಪ್ರಜ್ಞಾಹೀನಾನಾಗಿ ಬಿದ್ದಿದ್ದಾನೆ. ಆತನ ತಾಯಿ ರೇಷ್ಮಾ ಅಡುಗೆ ಮನೆಯಲ್ಲಿದ್ದರು.
ಉಸಿರಾಟದ ತೊಂದರೆ ಎದುರಿಸಿದ್ದ ಆತನನ್ನು ಪೋಷಕರು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದ್ಯೊದಿದ್ದರು. ಆದರೆ ಮಗುವನ್ನ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.
ನಂತರ ಮೃತದೇಹವನ್ನು ವಿಕ್ಟೋರಿಯಾ ಆಸ್ರತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದರು, ಸಂಜೆ ವೇಳೆ ಬಾಲಕನ ಅಂತ್ಯಕ್ರಿಯೆ ನಡೆಸಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


