ರಾಜ್ಯ

ಏಪ್ರಿಲ್ 18ರಿಂದ ಸಿಇಟಿ ಪರೀಕ್ಷೆ

ವೃತ್ತಿಪರ ಶಿಕ್ಷಣ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏಪ್ರಿಲ್ 18ರಿಂದ ಆರಂಭವಾಗಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ತಿಳಿಸಿದೆ.

ಏಪ್ರಿಲ್ 18ರಿಂದ ಸಿಇಟಿ ಪರೀಕ್ಷೆ
ಸಂಗ್ರಹ ಚಿತ್ರ
Published On :
ಬೆಂಗಳೂರು: ವೃತ್ತಿಪರ ಶಿಕ್ಷಣ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏಪ್ರಿಲ್ 18ರಿಂದ ಆರಂಭವಾಗಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ತಿಳಿಸಿದೆ. 
ಈ ಬಗ್ಗೆ ಮಾಹಿತಿ ನೀಡಿರುವ ಸಿಇಟಿ ನಿರ್ದೇಶಕಿ ವಿನೋದ ಪ್ರಿಯಾ ಅವರು, ಇಂಜಿನಿಯರಿಂಗ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಏಪ್ರಿಲ್ 18, 19 ಮತ್ತು 20ಕ್ಕೆ ಸಿಇಟಿ ಪರೀಕ್ಷೆ ನಡೆಯಲಿದೆ. ಅಂತೆಯೇ ಮೆಡಿಕಲ್, ಆಯುಷ್, ನ್ಯಾಚುರೋಪತಿ, ಯೋಗ,ಯುನಾನಿ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಮೂಲಕ ಅವಕಾಶವಿಲ್ಲ. ಈ ಕೋರ್ಸ್’ಗಳಿಗೆ ನೀಟ್ ನ ಅಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಪ್ರಿಲ್ 18ರಂದು ಜೀವಶಾಸ್ತ್ರ, ಏಪ್ರಿಲ್ 19 ರಂದು ಗಣಿತ, ಏಪ್ರಿಲ್ 20 ರಂದು ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಅಂತೆಯೇ ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನ 86 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1,98,639 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಡಿದ್ದಾರೆ. ಅದರಲ್ಲಿ 1,00,071 ವಿದ್ಯಾರ್ಥಿಗಳು ಮತ್ತು 98,568 ವಿದ್ಯಾರ್ಥಿನಿಯರಿದ್ದಾರೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಸಹಾಯಕ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ ಎಸ್ಪಿಗಳಿಗೆ ಖಜಾನೆಗಳಿಗೆ ಹೆಚ್ಚಿನ ಭದ್ರತೆ ವಹಿಸುವ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.
ಒಟ್ಟು 430 ಪರೀಕ್ಷಾ ವೀಕ್ಷಕರು, 860 ವಿಶೇಷ ಜಾಗೃತಿ ದಳ ಸದಸ್ಯರು, 430 ಪ್ರಶ್ನೆ ಪತ್ರಿಕೆ ಪಾಲಕರು, 12,440 ಕೊಠಡಿ ಮೇಲ್ವಿಚಾರಕರ ಕಣ್ಗಾವಲಿನಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಇನ್ನು ಏಪ್ರಿಲ್ 30ರಂದು  ಪಿಯು ಫಲಿತಾಂಶ ಪ್ರಕಟವಾಗಲಿದ್ದು, ಅಂದು ವೆಬ್ ಸೈಟ್‌ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.