ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅಧಿಕಾರ ಸ್ವೀಕಾರ
ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

Published On :
ಹಾಸನ: ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಂದೀಪ್ ಎರಡು ತಿಂಗಳ ಹಿಂದೆಯೇ ಹಾಸನಕ್ಕೆ ವರ್ಗವಾಗಿದ್ದರು. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ ಇದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮತ್ತು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಸಿಎಟಿ ತೀರ್ಪು ಹೊರಬಿದ್ದಿದ್ದು, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.
ಹೀಗಾಗಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಅಧಿಕೃತವಾಗಿದ್ದು, ಇಂದು ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನೂತನ ಡಿಸಿ ರಂದೀಪ್ ಅವರು ಇಂದು ಹಾಸನಾಂಬೆ ದೇವಿಗೆ ಪೂಜೆ ಸಲ್ಲಿಸಿದ ನಂತರ ಅಧಿಕಾರ ಸ್ವೀಕರಿಸಿದರು. ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬರಲಿಲ್ಲ. ಹೀಗಾಗಿ ಸಹಾಯಕ ಡಿಸಿ ಪೂರ್ಣಿಮಾ ಅವರಿಂದ ರಂದೀಪ್ ಅಧಿಕಾರ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka GovernmentಹಾಸನHassanಕರ್ನಾಟಕ ಸರ್ಕಾರಜಿಲ್ಲಾಧಿಕಾರಿDistrict CollectorRohini SindhuriD. Randeepಡಿ ರಂದೀಪ್ರೊಹಿಣಿ ಸಿಂಧೂರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


