ರಾಜ್ಯ

ಕರ್ನಾಟಕ ಚುನಾವಣೆ: ಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ಭಿನ್ನಮತ

ಪಕ್ಷದಲ್ಲಿನ ಸ್ಪರ್ಧಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಕಾಂಗ್ರೆಸ್ ನಲ್ಲಿ ...

ಕರ್ನಾಟಕ ಚುನಾವಣೆ: ಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ಭಿನ್ನಮತ
ಸಾಂದರ್ಭಿಕ ಚಿತ್ರ
Published On :

ಮಡಿಕೇರಿ: ಪಕ್ಷದಲ್ಲಿನ ಸ್ಪರ್ಧಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಮತ್ತು ಅಸಮಾಧಾನ ಭುಗಿಲೆದ್ದಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಪಂಡ ಮುತಪ್ಪ ಮತ್ತು ಭಾರತ ರಾಷ್ಟ್ರೀಯ ವ್ಯಾಪಾರ ಒಕ್ಕೂಟ ಕಾಂಗ್ರೆಸ್ (ಐಎನ್ಟಿಯುಸಿ) ಉಪಾಧ್ಯಕ್ಷ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಇಲ್ಲಿ ಕಾಂಗ್ರೆಸ್ ಹೆಚ್.ಎಸ್.ಚಂದ್ರಮೌಳಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ವಿರಾಜಪೇಟೆ ಕ್ಷೇತ್ರಕ್ಕೆ ಎಂಎಲ್ ಸಿ ಅರುಣ್ ಮಾಚಯ್ಯ ಅವರ ಹೆಸರನ್ನು ಪಕ್ಷದ ಕಾರ್ಯಕರ್ತರು ಸ್ವಾಗತಿಸಿದ್ದರೆ, ಹೆಚ್ ಎಸ್ ಚಂದ್ರಮೌಳಿಯವರ ಹೆಸರು ಬಹುತೇಕ ಪಕ್ಷದ ಕಾರ್ಯಕರ್ತರಿಗೆ ಇಷ್ಟವಾಗಿಲ್ಲ.

ನಾನು ಸ್ವತಂತ್ರ ಅಭ್ಯರ್ಥಿಯಾಗಿ ಮಡಿಕೇರಿಯಿಂದ ಸ್ಪರ್ಧಿಸಲಿದ್ದು ಇದೇ 20ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ನಪಂಡ ಮುತಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.