ರಾಜ್ಯ

ಕೊಪ್ಪಳದಲ್ಲಿ ಹೊತ್ತಿ ಉರಿದ ಬಸ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಬೇಕಿದ್ದ ಭಾರೀ ದುರಂತವೊಂದು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ತಪ್ಪಿದೆ...

ಕೊಪ್ಪಳದಲ್ಲಿ ಹೊತ್ತಿ ಉರಿದ ಬಸ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ
ಕೊಪ್ಪಳದಲ್ಲಿ ಹೊತ್ತಿಉರಿದ ಬಸ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ
Published On :
ಕೊಪ್ಪಳ: ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಬೇಕಿದ್ದ ಭಾರೀ ದುರಂತವೊಂದು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ತಪ್ಪಿದೆ. 
ಖಾಸಗಿ ಬಸ್ ವೊಂದು ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಯಲಬುರ್ಗಾ ತಾಲೂಗಿನ ಗುನ್ನಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರ ಚತುಷ್ಪಥ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಗುನ್ನಾಳ್ ಕ್ರಾಸ್ ಬಳಿ ಬಸ್ ನಲ್ಲಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಈ ವೇಳೆ ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 32 ಮಂದಿ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಇಂದು ಬೆಳಗಿನ ಜಾವ 5.30ರ ವೇಳೆಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸುವಂತೆ ಸೂಚಿಸಿದ್ದಾರೆ. ಸೂಚನೆಯಂತೆಯೇ ಪ್ರಯಾಣಿಕರು ಲಗೇಜ್ ಸಮೇತ ಕೆಳಗೆ ಇಳಿದಿದ್ದಾರೆ, ಕೆಲವೇ ನಿಮಿಷಗಳಲ್ಲಿ ಬೆಂಕಿ ಬಸ್ ಸುತ್ತಲೂ ಆವರಿಸಿ, ಹೊತ್ತಿಉರಿದಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.