ಕರಾವಳಿ ತೀರದಲ್ಲಿ ಅಲೆಗಳ ಅಬ್ಬರ: ನೀರಿಗಿಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ
ಹವಾಮಾನ ವೈಪರೀತ್ಯದಿಂದಾಗಿ ಅರಬ್ಬೀ ಸಮುದ್ರದಲ್ಲಿ ಶನಿವಾರ ರಾತ್ರಿ ಪ್ರಾರಂಭವಾಗಿದ್ದ ಅಲೆಗಳ ಅಬ್ಬರ ಭಾನುವಾರ ಕೂಡ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಸಾವು-ನೋವುಗಳನ್ನು ತಪ್ಪಿಸುವ ಸಲುವಾಗಿ...

Published On :
ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಅರಬ್ಬೀ ಸಮುದ್ರದಲ್ಲಿ ಶನಿವಾರ ರಾತ್ರಿ ಪ್ರಾರಂಭವಾಗಿದ್ದ ಅಲೆಗಳ ಅಬ್ಬರ ಭಾನುವಾರ ಕೂಡ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಸಾವು-ನೋವುಗಳನ್ನು ತಪ್ಪಿಸುವ ಸಲುವಾಗಿ ನೀರಿಗಿಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.
ಕಡಲ ತೀರದ ಬಳಿ ಶನಿವಾರ ಬಂದಿದ್ದ ಜನರು ಎಚ್ಚರಿಕೆ ನಡುವೆಯೂ ನೀರಿಗಿಳಿಯಲು ಮುಂದಾಗುತ್ತಿದ್ದರು. ಹೀಗಾಗಿ ಜನರನ್ನು ತಡೆಯಲು ಬೀಚ್ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದರು. ಹೀಗಾಗಿ ಅಧಿಕಾರಿಗಳು ನಿನ್ನೆ ಕಡಲತೀರದ ಸುತ್ತಲೂ ಸಿಬ್ಬಂದಿಗಳನ್ನು ನೇಮಿಸಿ, ಪ್ರವಾಸಿಗರು ನೀರಿಗಿಳಿಯದಂತೆ ನೋಡಿಕೊಳ್ಳುವಂತೆ ಮಾಡಿದ್ದರು.
ಪಣಂಬೂರು ಕಡಲತೀರದಲ್ಲಿ ಮೀನುಗಾರಿಗೆ ನಡೆಸುತ್ತಿದ್ದ ಮೀನುಗಾರರು ಅಲೆಗಳ ಅಬ್ಬರ ಜೋರಾಗಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಾಹಿತಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದರು.
ತಣ್ಣೀರುಬಾವಿ ಸಿಬ್ಬಂದಿಗಳು ಭಾನುವಾರ ಬೆಳಿಗ್ಗೆ 11 ಗಂಟೆಯಿಂದಲೇ ನೀರಿನಿಂದ ಸಂಪೂರ್ಣವಾಗಿ ದೂರ ಉಳಿಯುವಂತೆ ಜನರಿಗೆ ರೇಡಿಯೋ ಮೂಲಕ ಮಾಹಿತಿ ನೀಡುತ್ತಿದ್ದರು. ಸೂಚನೆಗಳನ್ನು ನೀಡುತ್ತಿದ್ದರೂ ಪ್ರವಾಸಿಗರು ನಮ್ಮ ಮಾತುಗಳನ್ನು ಕೇಳುತ್ತಿರಲಿಲ್ಲ. ಜನರನ್ನು ನಿಯಂತ್ರಿಸುವುದು ಭಾರೀ ಕಷ್ಟವಾಗಿತ್ತು. ಹೀಗಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಟ್ಟುನಿಟ್ಟಾಗಿ ಸೂಚನೆ ನೀಡುವಂತೆ ತಿಳಿಸಲಾಗಿತ್ತು ಎಂದು ತಣ್ಣೀರುಬಾವಿ ಜೀವರಕ್ಷಕ ದಳದ ಸಿಬ್ಬಂದಿ ಪ್ರದೀಪ್ ಕುಮಾರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


