ರಾಜ್ಯ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸೇರಿ ನಾಲ್ವರು ಜಲಸಮಾಧಿ

ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶ್ರೀನಿವಾಸ ನಗರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸೇರಿ ನಾಲ್ವರು ಜಲಸಮಾಧಿ
ಸಾಂದರ್ಭಿಕ ಚಿತ್ರ
Published On :
ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶ್ರೀನಿವಾಸ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಭೂಪಸಂದ್ರ ನಿವಾಸಿಗಳಾದ  ಸಬಾ(12),ಹುರಿಯಾ(8), ಸೌದತ್(10) ಮತ್ತು ಆಸಿಫ್(26)  ಶ್ರೀನಿವಾಸ ಸಾಗರ ಜಲಾಶಯದ ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ.
ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದ ಎರಡು ಕುಟುಂಬಗಳು ಶ್ರೀನಿವಾಸ ನಗರದ ಕೆರೆ ವೀಕ್ಷಣೆಗೆ ಹೋಗಿದ್ದಾಗ ನೀರಿನಲ್ಲಿ ಆಟ ಆಡಲು ಇಳಿದಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿದ್ದರು. ಆ ಸಮಯ ಅವರ ರಕ್ಷಣೆಗೆ ತೆರಳಿದ್ದ ಕಾರು ಚಾಲಕ ಆರೀಫ್‌ ಸಹ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸಧ್ಯ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ದೇಹಗಳಿಗಾಗಿ ಹುಡುಕಾಟ ನಡೆದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.