ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಧರೆಗುರುಳಿದ ಮರ, ವಿದ್ಯುತ್ ಕಂಬಗಳು
ಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

Published On :
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.
ನಗರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು, ಎಲೆಕ್ಟ್ರಿಕ್ ಕಂಬಗಳು ಧರೆಗುರುಳಿದ ಪರಿಣಾಮ ವಾಹನ ದಟ್ಟಣೆ ಉಂಟಾಗಿದೆ.
ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಗಾಯತ್ರಿನಗರ, ಸಹಕಾರ ನಗರ, ಜೆ.ಪಿ.ಪಾರ್ಕ್, ಮಹಾಲಕ್ಷ್ಮಿ ಲೇಔಟ್, ಸಂಜಯನಗರ, ಯಶವಂತಪುರ, ಗೊರಗುಂಟೆಪಾಳ್ಯ, ಜಾಲಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯು ಜೋರಾಗಿತ್ತು. ಅದರ ಜತೆಗೆ ಬಿರುಗಾಳಿಯ ಆರ್ಭಟ ಹೆಚ್ಚಾಗಿತ್ತು.
ಬಸವೇಶ್ವರ ನಗರದಲ್ಲಿ ವಿದ್ಯುತ್ ಕಂಬವೊಂದು ಕಾರಿನ ಮೇಲೆ ಉರುಳಿಬಿದ್ದಿದ್ದು, ಅದರ ಸಮೀಪದಲ್ಲೇ ಮತ್ತೊಂದು ಮರ ಕಾರೊಂದರ ಮೇಲೆ ಬಿದ್ದಿದೆ.
ಮಲ್ಲೇಶ್ವರದ ಮುಖ್ಯರಸ್ತೆ, ಭಾರತೀಯ ವಿಜ್ಞಾನ ಸಂಸ್ಥೆ, ಸರ್ಕಲ್ ಮಾರಮ್ಮ ದೇವಸ್ಥಾನ ಎದುರಿನ ರಸ್ತೆ ಹಾಗೂ ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವಾಹನಗಳ ದಟ್ಟಣೆ ಉಂಟಾಯಿತು. ಮೇಖ್ರಿ ಸರ್ಕಲ್ ಹಾಗೂ ಪ್ರೌಢಶಿಕ್ಷಣ ಮಂಡಳಿ ಎದುರಿನ ರಸ್ತೆಯಲ್ಲಿ ಮರದ ಕೊಂಬೆಗಳು ಬಿದ್ದು ವಾಹನಗಳ ಓಡಾಟಕ್ಕೆ ಅಡ್ಡಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


