ಬಾಗಲಕೋಟೆ ಕ್ಷೇತ್ರ: ಸ್ಥಳಾಂತರಗೊಂಡ ಕುಟುಂಬಗಳ ಸಮಸ್ಯೆಗಳೇ ಪ್ರಮುಖ
ಕೃಷ್ಣ ಮೇಲ್ದಂಡೆ ಯೋಜನೆಯ ಆಲಮಟ್ಟಿ ಅಣೆಕಟ್ಟು ನಿರ್ಮಾಣಕ್ಕಾಗಿ ನೂರಾರು ಹಳ್ಳಿಗಳು ಮುಳ್ಳುಗಡೆಯ ನಂತರ ಕೆಲ ಗ್ರಾಮಗಳ ಜನರನ್ನು ನವನಗರಕ್ಕೆ ಸ್ಥಳಾಂತರ ಮಾಡಲಾಗಿದೆ. ಆದರೆ, ಈ ಜನರಿಗೆ ಇನ್ನೂ ಗುರುತಿನ ಚೀಟಿ ನೀಡಿಲ್ಲ.

ಬಾಗಲಕೋಟೆ : ಕೃಷ್ಣ ಮೇಲ್ದಂಡೆ ಯೋಜನೆಯ ಆಲಮಟ್ಟಿ ಅಣೆಕಟ್ಟು ನಿರ್ಮಾಣಕ್ಕಾಗಿ ನೂರಾರು ಹಳ್ಳಿಗಳು ಮುಳ್ಳುಗಡೆಯ ನಂತರ ಕೆಲ ಕುಟುಂಬಗಳನ್ನು ನವನಗರಕ್ಕೆ ಸ್ಥಳಾಂತರ ಮಾಡಲಾಗಿದೆ.
ಮನೆ, ಮಠ ಕಳೆದಕೊಂಡ ಸುಮಾರು ಒಂದು ಸಾವಿರಕ್ಕೂ ಅಧಿಕ ಕುಟುಂಬಗಳು ಇಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿವೆ. ಆದರೆ. ಯಾವುದೇ ರೀತಿಯ ಗುರುತಿನ ಪತ್ರ ನೀಡಿಲ್ಲ. ಇದರಿಂದಾಗಿ ಮತದಾನ ಮಾಡಲು ಹುಡುಕಾಡುವ ಪರಿಸ್ಥಿತಿ ಎದುರಾಗಿದೆ.
2005ರಲ್ಲಿ ಯೋಜನೆ ಪೂರ್ಣಗೊಂಡಿದ್ದರೂ ಈವರೆಗೂ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ಮೂಲ ಸ್ಥಳದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರೂ ಮತದಾನ ಮಾಡುವಂತಿಲ್ಲ ಎಂದು ಹರೀಶ್ ಹೇಳುತ್ತಾರೆ.
ವಿಜಯಪುರ, ಬಾಗಲಕೋಟೆ. ಕಲಬುರಗಿ. ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಬರ ಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.
ಅಣೆಕಟ್ಟು ನಿರ್ಮಾಣಕ್ಕಾಗಿ ಬಾಗಲಕೋಟೆಯ ಅಧಿಕ ಪ್ರಮಾಣದ ಭೂಮಿಯನ್ನು ಮುಳುಗಡೆ ಆಗಿದೆ. ಅಲ್ಲದೇ, ಮುಳಗಡೆಯಾದ ಪ್ರದೇಶಗಳ ಜನರಿಗೆ ನವನಗರದಲ್ಲಿ ನಿವೇಶನ ಹಾಗೂ ಪರಿಹಾರ ಹಂಚಿಕೆ ಮಾಡಲಾಗಿದ್ದು, ಒಂದು ಸಾವಿರ ಕುಟುಂಬ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿವೆ.
ಸರ್ಕಾರದಿಂದ ಪರಿಹಾರ ಸಿಗಲಿದೆ ಎಂಬ ಭರವಸೆಯಲ್ಲಿಯೇ ಜನ ಬದುಕು ದೂಡುತ್ತಿದ್ದಾರೆ. ಪರಿಹಾರ ನೀಡುವಲ್ಲಿ ವರ್ಷದಿಂದ ವರ್ಷಕ್ಕೆ ವಿಳಂಬ ಮಾಡಲಾಗುತ್ತಿದೆ . ನಾವು ಏಲ್ಲಿಗೆ ಹೋಗಬೇಕು ಎಂದು ಹರೀಶ್ ಆಕ್ರೋಶ ವ್ಯಕ್ತಪಡಿಸುತ್ತಾರೆ.
ಈ ಉದ್ದೇಶಕ್ಕಾಗಿ 2005ರಲ್ಲಿ ಎಸ್ ಎಂ ಕೃಷ್ಣ ಸರ್ಕಾರದ ಅವಧಿಯಲ್ಲಿ 406 ಕೋಟಿ ರೂಪಾಯಿ ಬಜೆಟ್ ಮೀಸಲಿಡಲಾಗಿತ್ತು. ಆದರೆ, ಈ ಹಣ ಮಾತ್ರ ಸ್ಥಳಾಂತರಗೊಂಡ ಕುಟುಂಬಗಳಿಗೆ ಸಿಕ್ಕಲ್ಲ ಅಣೆಕಟ್ಟು ಎತ್ತರವನ್ನು ಹೆಚ್ಚಿಸಲು 1 ಸಾವಿರಕ್ಕೂ ಹೆಚ್ಚು ಆಸ್ತಿಯನ್ನು ಮುಳುಗಡೆ ಮಾಡಲಾಗಿತ್ತು ಎಂದು ಮತ್ತೊಬ್ಬರು ಹೇಳುತ್ತಾರೆ.
ಭೂ ಸ್ವಾಧೀನದ ಆರಂಭದಲ್ಲಿ ಸರ್ಕಾರ 1 ಸಾವಿರ ಕೋಟಿ ರೂ. ಪಾವತಿಸಿದೆ. ಆದರೆ, ಈಗಿನ ಮಾರುಕಟ್ಟೆ ಮೌಲ್ಯಕ್ಕನ್ನುಗುಣವಾಗಿ ಪರಿಹಾರ ನೀಡಬೇಕೆಂಬುದು ಇಲ್ಲಿನ ಜನರ ಬೇಡಿಕೆಯಾಗಿದೆ. ಈ ಸಂಬಂಧ ಜನಪ್ರತಿನಿಧಿಗಳು ಹಾಗೂ ಬಾಗಲಕೋಟೆ ಅಭಿವೃದ್ಧಿ ಪ್ರಾಧಿಕಾರ ಫಲಾನುಭವಿಗಳೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದು ಇಲ್ಲಿನ ಜನರು ಆರೋಪಿಸಿದ್ದಾರೆ.
ಒಂದು ವೇಳೆ ಆಲಮಟ್ಟಿ ಜಲಾಶಯದ ನೀರಿನ ಪ್ರಮಾಣ ಹೆಚ್ಚಳವಾದರೆ, ಮಾರ್ಕೆಟ್ ಪ್ರದೇಶ ಮತ್ತು ಪಂಕ ಮಸೀದಿ ಸೇರಿದಂತೆ 860 ಕಟ್ಟಡಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ ಎಂದು ಅಂಗಡಿ ಮಾಲೀಕ ನವಾಜ್ ಎಂಬವರು ಹೇಳುತ್ತಾರೆ.
ಮುಳಗಡೆಯಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸದಿರುವುದು ಚುನಾವಣಾ ವಿಷಯವಾಗಿದೆ. ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮತ್ತೊಬ್ಬರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


