ರಾಜ್ಯ

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವು!

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವು!
ಸಂಗ್ರಹ ಚಿತ್ರ
Published On :
ಮೈಸೂರು: ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಎಚ್.ಡಿ ಕೋಟೆ ತಾಲೂಕಿನ ಗೋಳೂರು ಮಸೀದಿಯ ಬಳಿ ಘಟನೆ ಈ ಘಟನೆ ನಡೆದಿದ್ದು, ಮೃತರನ್ನು ತಂದೆ ಚಾಲಕಲ್ ಬೇಬಿ(53), ಮಗ ಅಜಿತ್(24) ಹಾಗೂ ಮಗಳು ಅನಿತ(18) ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ಕೇರಳದ ಕಬಿನಿ ಗಿರಿ ನಿವಾಸಿಗಳು ಎಂದು ತಿಳಿದು ಬಂದಿದ್ದು, ಮಗಳು ಅನಿತಾ ಸ್ನಾನ ಮಾಡುವಾಗ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದಾಳೆ. ಮಗಳು ಅನಿತಾಳನ್ನು ರಕ್ಷಿಸಲು ಆಕೆಯ ತಂದೆ ನದಿಯ ಬಳಿ ಹೋದ ಅವರೂ ಕೂಡ ನೀರಿನಲ್ಲಿ ಮುಳುಗಿದ್ದಾರೆ. ತಂದೆಗೆ ಸಹಾಯ ಮಾಡಲು ಹೋದ ಮಗ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತಂತೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದು, ಅನಿತಾ ಸ್ನಾನ ಮಾಡುತ್ತಿದ್ದ ವೇಳೆ ದಿಢೀರನೆ ನೀರಿನ ರಭಸ ಹೆಚ್ಚಾಗಿದೆ. ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಅನಿತಾಳನ್ನು ಕಾಪಾಡಲು ಹೋದ ತಂದೆ ಹಾಗೂ ಸಹೋದರ ಕೂಡ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕೇರಳದ ಪುಲ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.