ಬೆಂಗಳೂರು: ನಕಲಿ ಗುರುತಿನ ಚೀಟಿ ಜಾಲದ ಮೇಲೆ ದಾಳಿ, 5 ಬಂಧನ
ಅಕ್ರಮವಾಗಿ ಚುನಾವಣಾ ಗುರುತಿನ ಚೀಟಿಗಳನ್ನು ಮಾಡಿಕೊಡುತ್ತಿದ್ದ ಜಾಲವೊಂದನ್ನು ಭೇದಿಸಿರುವ ಪೀಣ್ಯ ಮತ್ತು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

Published On :
ಬೆಂಗಳೂರು; ಅಕ್ರಮವಾಗಿ ಚುನಾವಣಾ ಗುರುತಿನ ಚೀಟಿಗಳನ್ನು ಮಾಡಿಕೊಡುತ್ತಿದ್ದ ಜಾಲವೊಂದನ್ನು ಭೇದಿಸಿರುವ ಪೀಣ್ಯ ಮತ್ತು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಜಯ್ ಕುಮಾರ್ (29), ನವೀನ್ ಕುಮಾರ್ (30), ಸಚಿನ್ (26), ದೇವರಾಜ್ (25), ಕರಿಸಿದ್ದೇಶ್ವರ (34) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ ಅನಧಿಕೃತವಾಗಿ ಚುನಾವಣಾ ಗುರುತಿನ ಚೀಟಿಗಳನ್ನು ತಯಾರು ಮಾಡಲು ಬಳಸುತ್ತಿದ್ದ ಕಂಪ್ಯೂಟರ್ ಸಿಸ್ಟಂಗಳು, ಪೆನ್ ಡ್ರೈವ್, ಹೊಸದಾಗಿ ಚುನಾವಣಾ ಗುರುತಿನ ಚೀಟಿ ಪಡೆಯಲು ಸಲ್ಲಿಸುವ ನಮೂನೆ ನಂ.6ರ ಅರ್ಜಿಗಳು, ಅನಧಿಕೃತವಾಗಿ ತಯಾರಿಸಿರುವ ವೋಟರ್ ಐಡಿಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಮುಖ ಆರೋಪಿ ಬಿಇ ಪದವೀಧರ ಸಂಜಯ್ ದಾಸರಹಳ್ಳಿ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ಕಂಪ್ಯೂಟರ್ ಅಡ್ಮಿನ್ ಆಗಿದ್ದನು. ನವೀನ್ ದಾಸರಹಳ್ಳಿ ತಾಲೂಕು ಕಚೇರಿಯಲ್ಲಿ ಮತಗಟ್ಟೆಗೆ ಮತದಾರರ ಹೆಸರನ್ನು ಸೇರಿಸುವ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಇಲ್ಲಿ ಕೆಲಸ ಮಾಡುವಾಗ ಆರೋಪಿಗಳು ಇಆರ್'ಎಂಎಸ್ ವೆಬ್ ಸೈಟ್'ನ ಬಳಕೆದಾರರ ಐಡಿ ಹಾಗೂ ಪಾಸ್ ವರ್ಡ್ ಮತ್ತು ಡಿಜಿಟಲ್ ಕೀಗಳನ್ನು ತಿಳಿದುಕೊಂಡಿದ್ದರು. ಕಳೆದ 7 ತಿಂಗಳ ಹಿಂದೆ ನವೀನ್ ನನ್ನು ದುರ್ನಡತೆ ಕಾರಣದಿಂದ ಕೆಲಸದಿಂದ ತೆಗೆದು ಹಾಕಲಾಗಿತ್ತು.
ಬಳಿಕ ನವೀನ್ ಸ್ನೇಹಿತ ಮತ್ತೊಬ್ಬ ಆರೋಪಿ ಸಚಿನ್ ಸೇರಿ ದೊಡ್ಡಬಿದರಕಲ್ಲು ಸಮೀಪ ಸೈಬರ್ ಕೆಫೆ ನಡೆಸುತ್ತಿದ್ದ. ಚುನಾವಣೆ ಹತ್ತಿ ಬರುತ್ತಿರುವ ಹಿನ್ನಲೆಯಲ್ಲಿ ಆರೋಪಿಗಳು ಚುನಾವಣಾ ಗುರುತಿನ ಚೀಟಿ ಮಾಡಿಕೊಟ್ಟು ಸುಲಭವಾಗಿ ಹಣ ಸಂಪಾದಿಸಲು ತೀರ್ಮಾನಿಸಿದ್ದರು. ದಾಸರಹಳ್ಳಿ ತಾಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಜಯ್ ಕೂಡ ಅವರೊಂದಿಗೆ ಕೈ ಜೋಡಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ದಾಸರಹಳ್ಳಿ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅರ್ಜಿ ನಮೂನೆ 6 ಸ್ವೀಕರಿಸದಿದ್ದರೂ ಮತದಾರರ ಪಟ್ಟಿಯಲ್ಲಿ ಅನಧಿಕೃತವಾಗಿ ಅಂತರ್ಜಾಲದ ಮತದಾರ ಹೆಸರು ಸೇರ್ಪಡೆಯಾಗುತ್ತಿತ್ತು. ಈ ಬಗ್ಗೆ ಚುನಾವಣಾಧಿಕಾರಿಗಳಾದ ನಾಗರತ್ನ ಮತ್ತು ಅನಂತರಾಮಯ್ಯ ಅವರು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಕಂಡು ಪೊಲೀಸರು ಅಂತರ್ಜಾಲದಲ್ಲಿರುವ ಮತದಾರರ ಮಾಹಿತಿ ಪಡೆದು ಯಾರಿಂದ ಗುರುತಿನ ಚೀಟಿ ಮಾಡಿಸಲಾಗಿದೆ ಎಂಬ ಮಾಹಿತಿ ಕಲೆ ಹಾಕಿದ್ದರು. ಅಲ್ಲದೆ. ಅಲ್ಲಿಂದ ಅಂತರ್ಜಾಲ ಬಳಕೆ ಮಾಡಲಾಗುತ್ತಿದೆ ಎಂಬುದರ ಮಾಹಿತಿ ತಿಳಿದು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruArrestCrimeಬಂಧನಅಪರಾಧKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆFake Voter IDನಕಲಿ ಮತದಾರರ ಗುರುತಿನ ಚೀಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


