ರಾಜ್ಯ

ಮದ್ಯದಂಗಡಿ ಪರವಾನಗಿ ಅಮಾನತು ಅದೇಶ: ಮರುಪರಿಶೀಲನೆಗೆ ಮುಂದಾದ ಸರ್ಕಾರ

ಅಬಕಾರಿ ನಿಯಮ ಮತ್ತು ಷರತ್ತು ಉಲ್ಲಂಘಿಸಿದ ಆರೋಪದಲ್ಲಿ 600ಕ್ಕೂ ಹೆಚ್ಚು ಅಬಕಾರಿ ಪರವಾನಗಿಗಳನ್ನು ಅಮಾನತುಪಡಿಸಿರುವ ಆದೇಶದ ತೆರವು ಕುರಿತಂತೆ ಮರು ಪರಿಶೀಲನೆ ನಡೆಸಲಾಗುತ್ತದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ...

ಮದ್ಯದಂಗಡಿ ಪರವಾನಗಿ ಅಮಾನತು ಅದೇಶ: ಮರುಪರಿಶೀಲನೆಗೆ ಮುಂದಾದ ಸರ್ಕಾರ
ಸಂಗ್ರಹ ಚಿತ್ರ
Published On :
ಬೆಂಗಳೂರು; ಅಬಕಾರಿ ನಿಯಮ ಮತ್ತು ಷರತ್ತು ಉಲ್ಲಂಘಿಸಿದ ಆರೋಪದಲ್ಲಿ 600ಕ್ಕೂ ಹೆಚ್ಚು ಅಬಕಾರಿ ಪರವಾನಗಿಗಳನ್ನು ಅಮಾನತುಪಡಿಸಿರುವ ಆದೇಶದ ತೆರವು ಕುರಿತಂತೆ ಮರು ಪರಿಶೀಲನೆ ನಡೆಸಲಾಗುತ್ತದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. 
ತಮ್ಮ ಪರವಾನಗಿ ಅಮಾನತುಪಡಿಸಿದ್ದ ಅಬಕಾರಿ ಇಲಾಖೆ ಆದೇಶ ರದ್ದು ಕೋರಿ ಬೆಂಗಳೂರಿನ ಸಿಟಿ ಮಾರುಕಟ್ಟೆ ಎನ್.ಕೆ.ವೈನ್ಸ್ ನ ಎಸ್.ಗೋಪಾಲ್ ಮತ್ತಿತರರು ಸಲ್ಲಿಸಿರುವ ಅರ್ಜಿಗಳು ಗುರುವಾರ ಹೈಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. 
ವಿಚಾರಣೆಗೆ ಅಬಕಾರಿ ಇಲಾಖೆ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹಾಜರಾಗಿ, 600ಕ್ಕೂ ಅಧಿಕ ಅಬಕಾರಿ ಪರವಾನಗಿಗಳನ್ನು ಅಮಾನತುಪಡಿಸಿರುವ ಆದೇಶದ ತೆರವಿದೆ ಒಂದು ವಾರದಲ್ಲಿ ಕ್ರಮ ಜರುಗಿಸುವಂತೆ ಎಲ್ಲಾ ಅಬಕಾರಿ ಡಿಸಿಗಳಿಗೆ ಸೂಚಿಸಿ ಅಬಕಾರಿ ಇಲಾಖೆ ಆಯುಕ್ತರು ಏ.25ರಂದು ಹೊರಡಿಸಿರುವ ಆದೇಶದ ಪ್ರತಿಯನ್ನು ಮೆಮೊ ಮೂಲಕ ಹೈಕೋರ್ಟ್'ಗೆ ಸಲ್ಲಿಸಿದರು. 
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಒಂದು ವಾರದಲ್ಲಿ ಅಬಕಾರಿ ಪರವಾನಗಿ ಅಮಾನತು ಆದೇಶ ಹಿಂಪಡೆಯಲು ಎಲ್ಲಾ ಕ್ರಮ ಕೈಗೊಳ್ಳಬೇಕೆಂದು ಅಬಕಾರಿ ಇಲಾಖೆಗೆ ನಿರ್ದೇಶಿಸಿ ಅರ್ಜಿಗಳನ್ನು ಇತ್ಯರ್ಥಪಡಿಸಿತು. 
ನಿಯಮ ಮತ್ತು ಷರತ್ತು ಉಲ್ಲಂಘಿಸಿದ ಮದ್ಯದ ಅಂಗಡಿಗಳನ್ನು ಮೂರು ವರ್ಗಗಳಾಗಿ ವರ್ಗೀಕರಿಸಲು ಅಬಕಾರಿ ಡಿಸಿಗಳಿಗೆ ಸೂಚಸಲಾಗಿದೆ. ಅವರಿಂದ ವರದಿ ಬಂದ ಬಳಿಕ ಪರಿಶೀಲಿಸಿ ಗಂಬೀರ ಉಲ್ಲಂಘನೆ ಮಾಡದ ಮದ್ಯದ ಅಂಗಡಿಗಳ ಪರವಾನಗಿ ಅಮಾನತು ಆದೇಶ ಹಿಂದಕ್ಕೆ ಪಡೆಯಲಾಗುವುದು. ಅಕ್ರಮ ಮದ್ಯ ದಾಸ್ತಾನು ಮತ್ತಿತರ ಗಂಭೀರ ಆರೋಪಗಳಿದ್ದರೆ ವಿಚಾರಣೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.