ಬೆಂಗಳೂರು: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನ ವಶ
ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದಲ್ಲಿ ನಡೆದಿದೆ.

Published On :
ಬೆಂಗಳೂರು: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದಲ್ಲಿ ನಡೆದಿದೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಬಾಲೇಪುರ ಚೆಕ್ ಪೋಸ್ಟ್ ನಲ್ಲಿ ಬೊಲೇರೋ ವಾಹನ ತಪಾಸಣೆ ನಡೆಸುವ ವೇಳೆ ದಾಕಲೆ ರಹಿತವಾದ ಚಿನ್ನ ಪತ್ತೆಯಾಗಿದೆ. ದೇವನಹಳ್ಳಿ ಮೂಲಕ ಹೊಸಕೋಟೆಗೆ ಸಾಗುತ್ತಿದ್ದ ವಾಹನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ.
ವಿಮಾನ ನಿಲ್ದಾಣದಿಂದ ತಂದ ಚಿನ್ನವನ್ನು ಬೇರೆಡೆಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಪೋಲೀಸರು ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರು 15 ಕೋಟಿ ರೂ. ಅಷ್ಟಿದೆ.
ಘಟನೆ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಚೆನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


