ಕರ್ನಾಟಕ: ಆದಾಯ ಮೀರಿ ಆಸ್ತಿ ಗಳಿಕೆ: 4 ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
ಆದಾಯ ಮೀರಿ ಆಸ್ತಿಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ 4 ಮಂದಿ ಸರ್ಕಾರಿ ಅದಿಕಾರಿಗಳಿಗೆ ಸೇರಿದ 10 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ...

Published On :
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ 4 ಮಂದಿ ಸರ್ಕಾರಿ ಅದಿಕಾರಿಗಳಿಗೆ ಸೇರಿದ 10 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿ ಒಟ್ಟು 10 ಸ್ಥಳಗಳಲ್ಲಿ ಎಸಿಬಿ ತಂಡಗಳು ಏಕಸಮಯದಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಬಾಲಕೋಟೆ ಮುಧೋಳ ತಾಲೂಕಿನ ಕಂದಾಯ ಇನ್ಸ್ ಪೆಕ್ಟರ್ ಸಂಗಪ್ಪಲ್ ಸೂದಿ, ಚಿತ್ರದುರ್ಗದ ತಾಲೂಕು ಪಂಚಾಯತಿ ಎಕ್ಸಿಕ್ಯೂಟಿವ್ ಆಫೀಸರ್ ಬಿ. ಲಕ್ಷ್ಮೀಪತಿ, ಕೋಲಾರದ ಕಂದಾಯ ಇಲಾಖೆ ಅಧಿಕಾರಿ ಮುನಿ ವೆಂಕಟಪ್ಪ, ಮಾಗಡಿ ತಾಲೂಕು ಸೋಲೂರಿನ ಆರೋಗ್ಯ ಸಮುದಾಯ ಕೇಂದ್ರದ ವ್ಯವಸ್ಥಾಪಕ ಎಂಎಲ್, ಗಣೇಶ್ ಮೂರ್ತಿಯವರ ಆಸ್ತಿ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಲ್ಲಾ ನಾಲ್ವರು ಅಧಿಕಾರಿಗಳ ವಿರುದ್ದ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಪರಿಶೀಲನೆಗಳನ್ನು ಮುಂದುವರೆಸಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕದಾಳಿraidಸರ್ಕಾರಿ ಅಧಿಕಾರಿಗಳುಭ್ರಷ್ಟಾಚಾರ ನಿಗ್ರಹ ದಳGovernment OfficialsAnti Corruption Bureau
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


