ಬೆಂಗಳೂರು: ಸಾಲ ವಸೂಲಿಗಾಗಿ 42 ಮಂದಿ ಪ್ರಯಾಣಿಕರಿದ್ದ ಬಸ್ ಹೈಜಾಕ್!
ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್ ವೊಂದನ್ನು 7 ಜನರ ದುಷ್ಕರ್ಮಿಗಳ ತಂಡವೊಂದು ಹೈಜಾಕ್ ಮಾಡಿದ್ದ ಘಟನೆ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.

Published On :
ಬೆಂಗಳೂರು: ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್ ವೊಂದನ್ನು 7 ಜನರ ದುಷ್ಕರ್ಮಿಗಳ ತಂಡವೊಂದು ಹೈಜಾಕ್ ಮಾಡಿದ್ದ ಘಟನೆ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಲಾಸಿ ಪಾಳ್ಯ ಬಸ್ ನಿಲ್ದಾಣದಿಂದ ಹೊರಟಿದ್ದ ಲಾಮಾ ಟ್ರಾವಲ್ಸ್ ನ KA 01 AG 636 ನಂಬರ್ನ ಬಸ್ ಅನ್ನು ದುಷ್ಕರ್ಮಿಗಳು ಹೈಜಾಕ್ ಮಾಡಲು ಪ್ರಯತ್ನಿಸಿದ್ದು, ಪೊಲೀಸರ ತುರ್ತು ಕಾರ್ಯಾಚರಣೆಯಿಂದಾಗಿ ಅಗಬಹುದಾಗಿದ್ದ ದುರಂತ ತಪ್ಪಿದೆ.
ಪೊಲೀಸರ ಮಾಹಿತಿಯಂತೆ ಹೈಜಾಕ್ ಆಗಿದ್ದ ಬಸ್ ನಲ್ಲಿ ಸುಮಾರು 42 ಮಂದಿ ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿನ ಕಲಾಸಿ ಪಾಳ್ಯದಿಂದ ಕೇರಳಕ್ಕೆ ಹೊರಟಿತ್ತು. ಈ ವೇಳೆ 2 ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಬಸ್ ಅನ್ನು ಹಿಂಬಾಲಿಸಿದ್ದು, ಮೈಸೂರು ಮುಖ್ಯ ರಸ್ತೆಯ ಬಳಿ ಬಸ್ ಅನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಬಸ್ ನೊಳಗೆ ಬಂದ ದುಷ್ಕರ್ಮಿಗಳು ತಾವು ಪೊಲೀಸರು ಎಂದು ಹೇಳಿ, ಬಸ್ ನ ದಾಖಲಾತಿ ಕೊಡುವಂತೆ ಹೇಳಿದ್ದಾರೆ. ಈ ವೇಳೆ ಸಿಬ್ಬಂದಿ ವಿರುದ್ಧ ವಾಗ್ವಾದ ನಡೆಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಬಸ್ ಚಾಲಕನನ್ನು ಬೈಕ್ ನಲ್ಲಿ ಕೂರಿಸಿಕೊಂಡ ಓರ್ವ ದುಷ್ಕರ್ಮಿ ಅಲ್ಲಿಂದ ತೆರಳುತ್ತಾನೆ. ಮತ್ತೋರ್ವ ಬಸ್ ತಾನೇ ಚಲಾಯಿಸಿಕೊಂಡು ರಾಜ ರಾಜೇಶ್ವರಿ ನಗರದ ಪಟ್ಟಣಗೆರೆ ಬಳಿ ಇರುವ ಗೋಡೌನ್ ಗೆ ಹೋಗುತ್ತಾನೆ. ಒಟ್ಟು 7 ಮಂದಿಯ ತಂಡ ಈ ಕೃತ್ಯವೆಸಗಿದೆ ಎಂದು ಹೇಳಲಾಗಿದೆ.
ಈ ವೇಳೆ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಉದ್ದೇಶಿಸಿ ತಪ್ಪಿಸಿಕೊಂಡು ಹೋಗುವ ಪ್ರಯತ್ನ ಮಾಡಬೇಡಿ, ಹಾಗೇನಾದರೂ ಆದರೆ ನಿಮ್ಮ ಜೀವಕ್ಕೇ ಅಪಾಯ ಎಂದು ಮತ್ತೋರ್ವ ಎಚ್ಚರಿಕೆ ನೀಡಿದ್ದಾನೆ. ದುಷ್ಕರ್ಮಿಗಳಿಂದ ಬಸ್ ಅಪಹರಣವಾಗುತ್ತಲೇ ಪ್ರಯಾಣಿಕರು ಭಯಭೀತಗೊಂಡಿದ್ದು, ಕೆಲ ಕಾಲ ಆತಂಕದಲ್ಲೇ ಸಮಯ ದೂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳ ಕಣ್ಣುತಪ್ಪಿಸಿ ಓರ್ವ ಪ್ರಯಾಣಿಕ ಪೊಲೀಸರಿದೆ ವಿಷಯ ಮುಟ್ಟಿಸಿದ್ದು, ವಿಚಾರ ತಿಳಿದ ಕೂಡಲೇ ಸುಮಾರು 30 ಪೊಲೀಸರ ತಂಡ ಸ್ಥಳಕ್ಕಾಗಮಿಸಿ ಬಸ್ ಅನ್ನು ಸುತ್ತುವರೆದಿದೆ.
ಪೊಲೀಸರು ಆಗಮಿಸುತ್ತಿದ್ದಂತೆಯೇ ನಾಲ್ಕು ಮಂದಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ತನಿಖೆ ನಡೆಸುತ್ತಿದ್ದಾರೆ.
ಸಾಲ ವಸೂಲಿಗಾಗಿ ನಡೆದಿತ್ತು ಹೈಡ್ರಾಮಾ
ಇನ್ನು ಪ್ರಕರಣ ಸಂಬಂಧ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರು, ಲಾಮಾ ಟ್ರಾವಲ್ಸ್ ಸಂಸ್ಥೆಯ ಮಾಲೀಕ ನೌಷಾದ್, ಸುಲ್ರಾನ್ ಫೈನಾನ್ಸ್ ಕಂಪನಿಯಿಂದ ಬಸ್ ಖರೀದಿಗಾಗಿ ಸಾಲ ಮಾಡಿದ್ದರಂತೆ. ಅದರ ತಿಂಗಳ ಕಂತನ್ನು(ಇಎಂಐ)ಸರಿಯಾಗಿ ಪಾವತಿಸಿದ ಇದ್ದುದರಿಂದ ಅವರ ಬಸ್ ಅನ್ನು ಅಪಹರಣ ಮಾಡಲಾಗಿತ್ತು ಎಂದು ಆರೋಪಿಗಳು ಬಾಯಿ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಸ್ ಮಾಲೀಕನಿಗೆ ಸಾಲ ನೀಡಿದ್ದ ಫೈನಾನ್ಸ್ ಕಂಪನಿಯವರು ಪ್ರಯಾಣಿಕರಿದ್ದಾಗಲೇ ಬಸ್ ವಶಪಡಿಸಿ ಕೊಳ್ಳಲು ಮುಂದಾಗಿದ್ದು ಇಷ್ಟೆಲ್ಲಾ ರಂಪಾಟಕ್ಕೆ ಕಾರಣವಾಗಿದೆ. ಅದರಲ್ಲೂ ತಾವು ಪೊಲೀಸರು ಎಂದು ಹೇಳಿ ಪ್ರಯಾಣಿಕರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಪರದಾಡುವಂತೆ ಮಾಡಿದ್ದಾರೆ.ಈ ಸಂಬಂಧ ಆರೋಪಿಗಳ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೩೪೧ ಮತ್ತು ೩೪೨ ರ ಅಡಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ರವಿ ಚೆನ್ನಣ್ಣನವರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


