ಡಿಜಿಸಿಎ ಪ್ರತಿಕ್ರಿಯೆ ಬಳಿಕ ರಾಹುಲ್ ವಿಮಾನ ದೋಷ ಪ್ರಕರಣ ಕುರಿತು ತನಿಖೆ: ಹುಬ್ಬಳ್ಳಿ ಪೊಲೀಸ್
ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರತಿಕ್ರಿಯೆ ಬಂದ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ವಿಮಾನ ದೋಷ ಪ್ರಕರಣವನ್ನು ತನಿಖೆ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿ ಪೊಲೀಸರು ಶುಕ್ರವಾರ ಹೇಳಿದ್ದಾರೆ...

Published On :
ಹುಬ್ಬಳ್ಳಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರತಿಕ್ರಿಯೆ ಬಂದ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ವಿಮಾನ ದೋಷ ಪ್ರಕರಣವನ್ನು ತನಿಖೆ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿ ಪೊಲೀಸರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಹುಬ್ಬಳ್ಳಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್ ಅವರು, ಪ್ರಕರಣ ಕುರಿತು ಡಿಜಿಸಿಎ ಪ್ರತಿಕ್ರಿಯೆ ನೀಡಿದ ಬಳಿಕವಷ್ಟೇ ನಾವು ತನಿಖೆ ನಡೆಸಲು ಸಾಧ್ಯ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ವಿಮಾನದ ಪೈಲಟ್ ಹಾಗೂ ಸಿಬ್ಬಂದಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಅವರ ಪ್ರತಿಕ್ರಿಯೆಗಳು ಹೆಚ್ಚು ತಾಂತ್ರಿಕವಾಗಿಯೇ ಇದ್ದು, ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕಲು ಸಾಧ್ಯವಾಗಿಲ್ಲ. ಹೀಗಾಗಿ ತಜ್ಞರ ಅಭಿಪ್ರಾಯಕ್ಕಾಗಿ ಡಿಜಿಸಿಎ ಬಳಿ ಮನವಿ ಮಾಡಿಕೊಳ್ಳಲಾಗಿದೆ. ತಜ್ಞರು ಯಾವಾಗ ಬೇಕಾದರೂ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.
ಡಿಸಿಪಿ ರೇಣುಕಾ ಸುಕುಮಾರ್ ಅವರು ಮಾತನಾಡಿ, ವಿಮಾನದ ಪೈಲಟ್ ಜಗತ್'ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 287 ಮತ್ತು 336, 11ರಕ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೈಲಟ್'ಗೆ ಹಾಗೂ ಸಿಬ್ಬಂದಿಗಳಿಗೆ ಈಗಾಗಲೇ ಸಮನ್ಸ್ ಜಾರಿ ಮಾಡಿರುವುದಾಗಿ ಅಧಿಕಾರಿಯೊಬ್ಬರು ಹೇಳಇದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆಯಲು ಯತ್ನಿಸುತ್ತಿದ್ದೇನೆಂದಿದ್ದಾರೆ.
ದೆಹಲಿಯಿಂದ ಹುಬ್ಬಳ್ಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಹೊತ್ತೊಯ್ಯುತ್ತಿದ್ದ ವಿಶೇಷ ವಿಮಾನದಲ್ಲಿ ದೋಷಗಳಿದ್ದವು ಎಂದು ಗೋಕುಲ್ ರಸ್ತೆ ಪೊಲೀಸರಿಗೆ ದೂರೊಂದು ಬಂದಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಕೀರ್ ಸನದಿ ಎಂಬುವವರು ದೂರು ದಾಖಲಿಸಿದ್ದರು.
ಕೌಶಲ್ ವಿದ್ಯಾರ್ಥಿ ಎಂಬ ವ್ಯಕ್ತಿಯಿಂದ ನನಗೆ ಇಮೇಲ್ ಬಂದಿದ್ದು, ವಿಮಾನದಲ್ಲಿ ದೋಷಗಳಿರುವುದಾಗಿ ತಿಳಿಸಿದ್ದ. ಆ ವ್ಯಕ್ತಿ ರಾಹುಲ್ ಅವರಿಗೆ ಆಪ್ತನಾಗಿದ್ದ ಎಂದು ಹೇಳಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


