ಕಾಂಗ್ರೆಸ್ ಅಭ್ಯರ್ಥಿ ಚೆಲುವರಾಯ ಸ್ವಾಮಿ ಆಪ್ತರ ಮನೆ ಮೇಲೆ ಐಟಿ ದಾಳಿ
ಜೆಡಿಎಸ್ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಭಾನುವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ.

Published On :
ನಾಗಮಂಗಲ: ಜೆಡಿಎಸ್ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಭಾನುವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ.
ಮಾಧ್ಯಮಗಳ ವರದಿಯನ್ವಯ ಚೆಲುವರಾಯಸ್ವಾಮಿ ಆಪ್ತ, ಸುಖಧರೆಯ ಲಕ್ಷ್ಮೀ ನಾರಾಯಣ ಎನ್ನುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ. ಸುಖಧರೆಯ ಲಕ್ಷ್ಮೀ ನಾರಾಯಣ ಮಾತ್ರವಲ್ಲದೇ ಇನ್ನಿಬ್ಬರು ಸಂಬಂಧಿಕರ ಮನೆಗಳ ಮೇಲೂ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಲಕ್ಷ್ಮೀನಾರಾಯಣ್ ಮುಂಬೈನಲ್ಲಿ ಹೊಟೆಲ್ ಉದ್ಯಮಿಯಾಗಿದ್ದು, ಮೈಸೂರು ಬೆಂಗಳೂರಿಂದ ಬಂದ ಸುಮಾರು 30 ಅಧಿಕಾರಿಗಳ ತಂಡ ದಾಳಿ ಮಾಡಿ ಮನೆಯಲ್ಲಿ ಸಿಕ್ಕದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ 30 ಸಾವಿರ ರು. ನಗದು ದೊರೆತಿದ್ದು, ಅದನ್ನು ಮನೆಯವರಿಗೇ ನೀಡಿ ಅಧಿಕಾರಿಗಳು ವಾಪಸ್ ಆಗಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressPoliticsರಾಜಕೀಯಮಂಡ್ಯMandyaCheluvaraya Swamyಐಟಿ ದಾಳಿIT raidKarnataka pollsಕರ್ನಾಟಕ ಚುನಾವಣೆಚೆಲುವರಾಯ ಸ್ವಾಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


