ಕಾಂಗ್ರೆಸ್ ಅಭ್ಯರ್ಥಿ ಎನ್. ಚೆಲುವರಾಯಸ್ವಾಮಿ ಬೆಂಬಲಿಗರಿಗೆ ಐಟಿ ಶಾಕ್
ನಾಗಮಂಗಲದ ಕಾಂಗ್ರೆಸ್ ಅಭ್ಯರ್ಥಿ ಎನ್. ಚೆಲುವರಾಯ ಸ್ವಾಮಿ ಅವರ ಬೆಂಬಲಿಗರಾದ ಲಕ್ಷ್ಮೀನಾರಾಯಣ, ಧನಂಜಯ್ಯ, ಹಾಗೂ ಬೆಟ್ಟೆಗೌಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯ : ನಾಗಮಂಗಲದ ಕಾಂಗ್ರೆಸ್ ಅಭ್ಯರ್ಥಿ ಎನ್. ಚೆಲುವರಾಯ ಸ್ವಾಮಿ ಅವರ ಬೆಂಬಲಿಗರಾದ ಲಕ್ಷ್ಮೀನಾರಾಯಣ, ಧನಂಜಯ್ಯ, ಹಾಗೂ ಬೆಟ್ಟೆಗೌಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚೆಲುವರಾಯಸ್ವಾಮಿ ಇತ್ತೀಚಿಗೆ ಜೆಡಿಎಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಸುಖದರೆ ಗ್ರಾಮದಲ್ಲಿರುವ ಹೋಟೆಲ್ ಉದ್ಯಮಿ ಲಕ್ಷ್ಮೀನಾರಾಯಣ ಅವರ ಮನೆ ಮೇಲೆ ಸುಮಾರು 30 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ತಪಾಸಣೆಯ ನಂತರ 30 ಸಾವಿರ ನಗದು ಹಾಗೂ ಬೆಳ್ಳಿಯ ಅಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಧನಂಜಯ್ಯ ಹಾಗೂ ಬೆಟ್ಟೆಗೌಡ ಅವರ ಮನೆ ಮೇಲೂ ನಡೆದ ದಾಳಿ ವೇಳೆ ಅನೇಕ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಮುಂಬೈಯಲ್ಲಿ ಸ್ವಂತ ಹೋಟೆಲ್ ಹೊಂದಿದ್ದಾರೆ.
ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಲಕ್ಷ್ಮೀನಾರಾಯಣ ಆರೋಪಿಸಿದ್ದಾರೆ. ಸ್ವಂತ ಹೋಟೆಲ್ ಹೊಂದಿದ್ದೇವೆ , ಯಾವುದೇ ರೀತಿಯ ಕಾನೂನು ಬಾಹಿರವಾಗಿ ಹಣ ಹಾಗೂ ಆಸ್ತಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ನಾಗಮಂಗಲದಲ್ಲಿ ಚೆಲುವರಾಯಸ್ವಾಮಿ ಅನೇಕ ಅಭಿವೃದ್ಧಿ ಕೆಲಸ ಮಾಡಿರುವುದರಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಹಲವು ಉದ್ಯಮಿಗಳು ನಾಗಮಂಗಲ ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ, ಜೆಡಿಎಸ್ ಕಾರ್ಯಕರ್ತರು ಅವರಿಗೆ ತೊಂದರೆ ನೀಡುತ್ತಿದ್ದಾರೆ. ಐಟಿ ದಾಳಿ ಮೂಲಕ ತಮ್ಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


