ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ: ಸಿಎಂ ಭರವಸೆ ನಡುವೆಯೂ ಬಂದ್ ನಡೆಸಲು ನಿರ್ಧಾರ
ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ಉತ್ತರ ಕರ್ನಾಟಕ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಂತಿಯುತ ಮಾತುಕತೆ ನಡೆಸಿ ಭರವಸೆಗಳನ್ನು ನೀಡಿದ್ದು, ಭರವಸೆಗಳ ನಡುವೆಯೂ ಆಗಸ್ಟ್ 2 ರಂದು ಬಂದ್ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ...

Published On :
ಬೆಂಗಳೂರು: ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ಉತ್ತರ ಕರ್ನಾಟಕ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಂತಿಯುತ ಮಾತುಕತೆ ನಡೆಸಿ ಭರವಸೆಗಳನ್ನು ನೀಡಿದ್ದು, ಭರವಸೆಗಳ ನಡುವೆಯೂ ಆಗಸ್ಟ್ 2 ರಂದು ಬಂದ್ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಾಯಕರು ಮುಖ್ಯಮಂತ್ರಿಗಳ ಭರವಸೆಗಳನ್ನು ಸ್ವಾಗತಿಸಿದ್ದಾರೆ. ಆದರೂ, ಬಂದ್ ಕರೆಯನ್ನು ಹಿಂಪಡೆಯಲು ನಿರಾಕರಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರ ಆಗ್ರಗಳಿಗಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ 15 ದಿನಗಳೊಳಗಾಗಿ ಮುಖ್ಯಮಂತ್ರಿಗಳು ಶಾಸಕರೊಂದಿಗೆ ಸಭೆಯನ್ನು ನಡೆಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಸೋಮಶೇಖರ್ ಕೊತ್ತಂಬಿ ಮಾತನಾಡಿ, ಪ್ರತ್ಯೇಕ ರಾಜ್ಯದ ಕೂಗು ಈಗಿನ ಸರ್ಕಾರದ ವಿರುದ್ಧವಲ್ಲ. 2007 ಇಸವಿಯಿಂದ ಈಚೆಗೆ ನಡೆಯುತ್ತಿದೆ. ಉತ್ತರ ಕರ್ನಾಟಕಕ್ಕೆ ಪ್ರೀತಿನಿಧ್ಯ ಕೊಡಿ. ಸುವರ್ಣಸೌಧವನ್ನು ಕಟ್ಟಿಸಿದ್ದೀರಾ. ಆದರೆ, ಅದು ನಿಷ್ಕ್ರಿಯವಾಗಿದೆ. ಅಧಿಕಾರ ವಿಕೇಂದ್ರೀಕರಣಗೊಳಿಸಿ ಎಂದು ಮನವಿ ಮಾಡಿಕೊಂಡರು.
ಉತ್ತರ ಕರ್ನಾಟಕದ ಎಲ್ಲಾ ಸಮುದಾಯಗಳು ಬಂದ್'ಗೆ ಕರೆ ನೀಡಿವೆ. ಹೀಗಾಗಿ ಎಲ್ಲರೊಂದಿಗೂ ಮಾತುಕತೆ ನಡೆಸಬೇಕಿದೆ. ಮುಖ್ಯಮಂತ್ರಿಗಳ ಭರವಸೆಗಳು ನಮಗೆ ಸಂತಸವನ್ನು ತಂದಿದೆ. ಆದರೆ, ಬಂದ್ ನಿರ್ಧಾರ ಕುರಿತಂತೆ ಯಾವುದೇ ಬದಲಾವಣೆಗಳಿಲ್ಲ. ಬಂದ್ ಕರೆ ಕುರಿತಂತೆ ಶೀಘ್ರದಲ್ಲಿಯೇ ಘೋಷಣೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
North Karnatakaಉತ್ತರ ಕರ್ನಾಟಕಬಂದ್bandhಹೆಚ್.ಡಿ.ಕುಮಾರಸ್ವಾಮಿHD. KumaraswamyUttara Karnataka Pratyeka Rajyaಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


