ಮಾಲೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಶವವಾಗಿ ಪತ್ತೆ
ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ಬಾಲಕಿ ರೈಲ್ವೆ ಸೇತುವೆ ಮೇಲೆ ಶವವಾಗಿ ಪತ್ತೆಯಾಗಿದ್ದಾಳೆ. ...

Published On :
ಕೋಲಾರ: ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ಬಾಲಕಿ ರೈಲ್ವೆ ಸೇತುವೆ ಮೇಲೆ ಶವವಾಗಿ ಪತ್ತೆಯಾಗಿದ್ದಾಳೆ.
ಮೊಂಡು ಆಯುಧದಿಂದ ಬಾಲಕಿಗೆ ಹೊಡೆದು ಸಾಯಿಸಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ವಿದ್ಯಾರ್ಥಿನಿ ನಗರದ ಖಾಸಿ ಶಾಲೆಯ 10ನೇತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು, ಬೆಳಗ್ಗೆ ಆಕೆಯ ತಂದೆ ಶಾಲೆಗೆ ಡ್ರಾಪ್ ಮಾಡಿದ್ದರು ಎಂದು ಕೇಂದ್ರ ವಲಯ ಐಜಿಪಿ ಬಿ.ದಯಾನಂದ್ ತಿಳಿಸಿದ್ದಾರೆ, ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.
ವಿದ್ಯಾರ್ಥಿನಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ತಲೆಯ ಮೇಲೆ ಹೊಡೆದು ಸ್ಥಳದಲ್ಲಿಯೇ ಆಕೆಯನ್ನು ಕೊಲ್ಲಲಾಗಿದೆ ಎಂದು ಜಿಲ್ಲಾ ಸೂಪರಿಂಡೆಂಟ್ ಆಫ್ ಪೊಲೀಸ್ ಎಂ.ರಾಜೀವ್ ತಿಳಿಸಿದ್ದಾರೆ.
ಮಾಲೂರು ಕ್ರೀಡಾಂಗಣದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಥ್ರೋಬಾಲ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಭಾಗವಹಿಸಿದ್ದಳು ಎಂದು ಶಾಲೆ ಆಡಳಿತ ಮಂಡಳಿ ತಿಳಿಸಿದೆ, ಕ್ರೀಡಾಕೂಟ ಮುಗಿದ ಮೇಲೆ ಆಕೆ ಮನೆಗೆ ಮರಳುತ್ತಿದ್ದ ಸಮಯದಲ್ಲಿ ಆಕೆಯ ಕೊಲೆಯಾಗಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


