ರಾಜ್ಯ

ಮೂಲಸೌಕರ್ಯಕ್ಕೆ ರಕ್ಷಣಾ ಇಲಾಖೆ ಭೂಮಿ ನೀಡಲು ರಕ್ಷಣಾ ಸಚಿವೆ ಒಪ್ಪಿಗೆ

ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯ ಸ್ವಾಧೀನ ಮಾಡಿಕೊಳ್ಳುವ ಕುರಿತಂತೆ ಉಂಟಾದ ಸಮಸ್ಯೆಯಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ರಕ್ಷಣಾ ಇಲಾಖೆಯ ಅಧಿಕಾರಿಗಳು ಅವಕಾಶ...

ಮೂಲಸೌಕರ್ಯಕ್ಕೆ ರಕ್ಷಣಾ ಇಲಾಖೆ ಭೂಮಿ ನೀಡಲು ರಕ್ಷಣಾ ಸಚಿವೆ ಒಪ್ಪಿಗೆ
ವಿಧಾನಸೌಧದಲ್ಲಿ ನಡೆದ ಸಭೆಗೆ ಆಗಮಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾಮರನ್
Published On :
ಬೆಂಗಳೂರು: ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯ ಸ್ವಾಧೀನ ಮಾಡಿಕೊಳ್ಳುವ ಕುರಿತಂತೆ ಉಂಟಾದ ಸಮಸ್ಯೆಯಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ರಕ್ಷಣಾ ಇಲಾಖೆಯ ಅಧಿಕಾರಿಗಳು ಅವಕಾಶ ನೀಡಬೇಕು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದ್ದಾರೆ. 
ವಿಧಾನಸೌಧದಲ್ಲಿ ನಡೆದ ಸಭೆಗೆ ಆಗಮಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾಮರನ್ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆತ್ಮೀಯವಾಗಿ ಸ್ವಾಗತಿಸಿದರು. 
ಬಳಿಕ ಬಿಬಿಎಂಪಿಯ ವಿವಿಧ ಕಾಮಗಾರಿಗಳಿಗೆ ಅಡ್ಡಿಯಾಗಿರುವ ರಕ್ಷಣಾ ಇಲಾಖೆಯ ಭೂಮಿಯನ್ನು ಬಿಬಿಎಂಪಿಗೆ ವರ್ಗಾಯಿಸುವ ಬಗ್ಗೆ ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಮಹತ್ವದ ಸಭೆ ನಡೆಸಿದರು. 
ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಆಗಮಿಸಿದ್ದಾಗ ಕುಮಾರಸ್ವಾಮಿಯವರು ಈ ಬಗ್ಗೆ ಸಮಾಲೋಚನೆ ಮಾಡಿದ್ದರು. ಈ ಬಗ್ಗೆ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರಿನಲ್ಲಿ ಕೈಗೊಂಡಿರುವ 10 ಯೋಜನೆಗಳಿಗೆ ಭೂ ವರ್ಗಾವಣೆ ಮಾಡಲು ಒಪ್ಪಿದ್ದೇವೆ. ಜೊತೆಗೆ ತಕ್ಷಣ ಭೂಮಿ ಹಸ್ತಾಂತರಿಸಬೇಕು. ಭೂಮಿ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಯದೆ ಕೂಡಲೇ ಕಾಮಗಾರಿಗೆ ಅವಕಾಶ ನೀಡಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.