ಉತ್ತರ ಕನ್ನಡ: ಹಿಟ್ಟಿನ ಗಿರಣಿಯಲ್ಲಿ ತಲೆ ಸಿಲುಕಿ ಮಹಿಳೆ ಸಾವು
ಕೆಲಸ ಮಾಡುತ್ತಿದ್ದ ಸಂದರ್ಭದಲ್ಲೇ ಆಕಸ್ಮಿಕವಾಗಿ ಹಿಟ್ಟಿನ ಗಿರಣಿಗೆ ತಲೆ ಸಿಲುಕಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.

Published On :
ಕುಮಟಾ: ಕೆಲಸ ಮಾಡುತ್ತಿದ್ದ ಸಂದರ್ಭದಲ್ಲೇ ಆಕಸ್ಮಿಕವಾಗಿ ಹಿಟ್ಟಿನ ಗಿರಣಿಗೆ ತಲೆ ಸಿಲುಕಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.
ಕುಮಟಾ ಜಿಲ್ಲೆಯ ಮಿರ್ಜಾನ್ ನಲ್ಲಿ ಈ ಘಟನೆ ಸಂಭವಿಸಿದ್ದು, ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ 30 ವರ್ಷದ ಮಾಲಿನಿ ನಾಯ್ಕ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ನೀಡಿರುವ ಮಾಹಿತಿಯನ್ವಯ ಯಂತ್ರದಲ್ಲಿ ಸಿಕ್ಕಿಹಾಕಿಕೊಂಡಿದ್ದ ವಸ್ತುವನ್ನು ತೆಗೆಯಲು ಗಿರಣಿ ಮಾಲೀಕರಾದ ಮಾಲಿನಿ ನಾಯ್ಕ ಮುಂದಾಗಿದ್ದಾರೆ. ಈ ವೇಳೆ ಅವರ ತಲೆ ಯಂತ್ರದೊಳಗೆ ಸಿಕ್ಕಿ ಹಾಕಿಕೊಂಡು ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಪ್ರಸ್ತುತ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttara Kannadaಸಾವುkarnataka policeಕರ್ನಾಟಕ ಪೊಲೀಸ್ಉತ್ತರ ಕನ್ನಡಕುಮಟಾKumataDeath in Flour Millಹಿಟ್ಟಿನ ಗಿರಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


