ರಾಮನಗರಕ್ಕೆ ಫಿಲ್ಮಿಂ ಸಿಟಿ ಸ್ಥಳಾಂತರ : ಸಿದ್ದರಾಮಯ್ಯರಿಂದ ಮುಖ್ಯಮಂತ್ರಿಗೆ ಮತ್ತೊಂದು ಪತ್ರ
ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾವಿಸಿರುವಂತೆ ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಮೈಸೂರಿನಲ್ಲಿ ಫಿಲ್ಮಿಂ ಸಿಟಿ ಸ್ಥಾಪಿಸುವ ಸಂಬಂಧ ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಧಾರ ಕೈಗೊಂಡಿದ್ದು, 100 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿದೆ ಮೈಸೂರಿನಲ್ಲಿಯೇ ಫಿಲ್ಮಿಂ ಸಿಟಿ ಆಗಬೇಕೆಂಬುದು ವರನಟ ಡಾ. ರಾಜ್ ಕುಮಾರ್ ಅವರ ಅಭಿಲಾಷೆ ಆಗಿತ್ತು ಎಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
1945ರಿಂದಲೂ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣವಾಗುತ್ತಿದೆ. ಈಗ ವಿಮಾನ ನಿಲ್ದಾಣ ಇರುವುದರಿಂದ ದೇಶ , ವಿದೇಶಗ ಚಿತ್ರ ನಿರ್ಮಾಪಕರು ಬಂದು ಚಿತ್ರೀಕರಣ ಮಾಡಲು ಸುಲಭವಾಗಿದೆ. ಆದ್ದರಿಂದ ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರ ಮಾಡುವ ನಿರ್ಧಾರವನ್ನು ಬದಲಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನು ಬದಲಿಸದಂತೆ ಹಾಗೂ ಅನ್ನ ಭಾಗ್ಯ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡದಂತೆ ಕಳೆದ ತಿಂಗಳು ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


