ರಾಮನಗರದಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ
ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಾ ರಾಮನಗರದಲ್ಲಿ ನೆಲೆಯೂರಿದ್ದ ಜಮತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಉಗ್ರ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ...

Published On :
ರಾಮನಗರ: ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಾ ರಾಮನಗರದಲ್ಲಿ ನೆಲೆಯೂರಿದ್ದ ಜಮತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಉಗ್ರ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಬಂಧಿತ ಶಂಕಿತ ಉಗ್ರರ 2014ರಲ್ಲಿ ನಡೆದ ಬುರ್ದ್ವಾನ್ ಸ್ಫೋಟ ಹಾಗೂ ಬಿಹಾರ ರಾಜ್ಯದ ಬೋಧ್ ಗಯಾ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದೆ.
ಬಂಧಿತನನ್ನು ಮುನೀರ್ ಶೇಖ್ (25) ಎಂದು ಗುರ್ತಿಸಲಾಗಿದೆ. ಈತ ರಾಮನಗರದ ತೃಪ್ ಲೇನ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ಮುನೀರ್ ಬಂಧನದ ವೇಳೆ ಆತನಿಂದ ಲ್ಯಾಪ್ ಟಾಪ್, ಜಿಲೇಟಿನ್ ಪುಡಿ, ಪ್ರವಾಸಿ ತಾಣ, ದೇಗುಲ, ಮಸೀದಿಗಳ ಮ್ಯಾಪ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


