ವಿಲೀನಗೊಳ್ಳಲಿವೆ ರಾಜ್ಯದ 14 ಸಾವಿರ ಸರ್ಕಾರಿ ಶಾಲೆಗಳು
ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ಇತರ ಪಾಲುದಾರ ನಿರ್ವಹಣೆದಾರರ ವಿರೋಧದ ಹೊರತಾಗಿಯೂ ...

ಬೆಂಗಳೂರು: ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ಇತರ ಪಾಲುದಾರ ನಿರ್ವಹಣೆದಾರರ ವಿರೋಧದ ಹೊರತಾಗಿಯೂ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಸರ್ಕಾರಿ ಶಾಲೆಗಳ ಪಟ್ಟಿಯನ್ನು ಪಡೆಯುತ್ತಿದೆ.
ಶಿಕ್ಷಣ ಇಲಾಖೆಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ವಿಲೀನಗೊಳಿಸುವ ಶಾಲೆಗಳ ಜಿಲ್ಲಾವಾರು ಪಟ್ಟಿಯನ್ನು ಗುರುತಿಸಿ ಅವುಗಳ ಹೆಸರುಗಳನ್ನು ನೀಡಲಾಗಿದೆ. ಇಂತಹ 14 ಸಾವಿರಕ್ಕೂ ಹೆಚ್ಚು ಶಾಲೆಗಳ ಪಟ್ಟಿಯ ಹೆಸರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದೆ.
ಇತ್ತೀಚೆಗೆ ಬಜೆಟ್ ನಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, 28 ಸಾವಿರಕ್ಕೂ ಅಧಿಕ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ವಿಲೀನಗೊಳಿಸಲಾಗುವುದು ಎಂದು ಘೋಷಿಸಿದ್ದರು. ಇದೀಗ ಶಿಕ್ಷಣ ಇಲಾಖೆ ಪ್ರತಿ ಜಿಲ್ಲೆಯಲ್ಲಿ ವಿಲೀನಗೊಳಿಸುವ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ.
ವಿದ್ಯಾರ್ಥಿಗಳ ಕೊರತೆ ಮತ್ತು ಆದ್ಯತೆ ಆಧಾರದ ಮೇಲೆ 14,712 ಶಾಲೆಗಳನ್ನು ಗುರುತಿಸಲಾಗಿದೆ. ಈ ಶಾಲೆಗಳು ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ 1 ಕಿಲೋ ಮೀಟರ್ ಅಂತರದಲ್ಲಿವೆ.
ವೈರುಧ್ಯವೆಂದರೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರ ತವರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಶಾಲೆಗಳು ವಿಲೀನಗೊಳ್ಳುತ್ತಿವೆ. ರಾಜ್ಯದ 14 ಸಾವಿರ ಶಾಲೆಗಳಲ್ಲಿ 25,231 ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


