ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಿಕೆ ಶಿವಕುಮಾರ್ ನೇಮಕ ಸರಿಯಲ್ಲ: ಎಸ್. ಆರ್. ಹಿರೇಮಠ್
ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ಸರಿಯಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On :
ಬಳ್ಳಾರಿ: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ಸರಿಯಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಭ್ರಷ್ಟಾಚಾರದ ಪ್ರತಿಬಿಂಬದಂತಿದ್ದಾರೆ. ಮೈಸೂರು ಮಿನರಲ್ಸ್ ಲಿಮಿಟೆಡ್ ಕಂಪನಿಯಿಂದ 10. 8 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಕಬ್ಬಿಣದ ಅದಿರು ಲೂಟಿ ಮಾಡಿದ್ದಾರೆ. ಇಂತಹವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ನೇಮಕ ಮಾಡುವ ಮೂಲಕ ಕಟುಕನ ಕೈಗೆ ಕುರಿ ನೀಡಿದಂತಾಗಿದೆ ಎಂದರು.
ಜನಾರ್ದನ ರೆಡ್ಡಿ ಅವರಂತೆ ಶೀಘ್ರದಲ್ಲಿಯೇ ಡಿ. ಕೆ. ಶಿವಕುಮಾರ್ ಕೂಡಾ ಪಾಶ್ಚ್ಯತಾಪ ಅನುಭವಿಸಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಳ್ಳಾರಿS R HiremathBallariಎಸ್ಜಿಲ್ಲಾ ಉಸ್ತುವಾರಿಆರ್ಡಿ. ಕೆ. ಶಿವಕುಮಾರ್DKShivakumarDistrict ministerಹಿರೇಮಠ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


