ರಾಜ್ಯ

ಬೆಳಗಾವಿ: ಮಕ್ಕಳಿಂದಲೇ ತನ್ನ ಬೈಕ್, ಶೌಚಾಲಯ ಕ್ಲೀನ್ ಮಾಡಿಸಿದ ಮುಖ್ಯ ಶಿಕ್ಷಕ

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಅವರಿಂದ ಶೌಚಾಲಯ ಹಾಗೂ ತನ್ನ ಬೈಕ್ ....

ಬೆಳಗಾವಿ: ಮಕ್ಕಳಿಂದಲೇ ತನ್ನ ಬೈಕ್, ಶೌಚಾಲಯ ಕ್ಲೀನ್ ಮಾಡಿಸಿದ ಮುಖ್ಯ ಶಿಕ್ಷಕ
ಬೈಕ್, ಶೌಚಾಲಯ ಕ್ಲೀನ್ ಮಾಡುತ್ತಿರುವ ಮಕ್ಕಳು
Published On :
ಬೆಳಗಾವಿ: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಅವರಿಂದ ಶೌಚಾಲಯ ಹಾಗೂ ತನ್ನ ಬೈಕ್ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಡಗಿವಾಡ ಗ್ರಾಮದಲ್ಲಿ ನಡೆದಿದೆ.
ಬಡಗಿವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮುಖ್ಯೋಪಧ್ಯಾಯ ಜೈಪಾಲ್ ಭಜಂತ್ರಿ ಅವರು ಪಾಠದ ಬದಲು ಬೈಕ್ ಕ್ಲೀನ್, ಬಿಸಿಯೂಟ ಪಾತ್ರೆ ಹಾಗೂ ಶೌಚಾಲಯವನ್ನು ತೊಳೆಯಲು ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದಾರೆ.
ಶಾಲಾ ಮಕ್ಕಳಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದು, ಶಿಕ್ಷಕನ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಮನ್ನಿಕೇರ್ ಅವರು, ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣ ಅಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.