ಹಾವೇರಿ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆ!
ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

Published On :
ಹಾವೇರಿ: ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು 17 ವರ್ಷದ ವಿದ್ಯಾರ್ಥಿನಿ ಸವಣೂರು ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ತಾಲೂಕಿನ ವರದಹಳ್ಳಿ ಬ್ರಿಡ್ಜ್ ಕೆಳಗಿರುವ ಪೊದೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಮೂಲಗಳ ಪ್ರಕಾರ ಸವಣೂರು ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ರೇಣುಕಾ ಪಾಟೀಲ್, ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ರೇಣುಕಾ ಎಂದಿನಂತೆ ಕಾಲೇಜಿಗೆ ತೆರಳಿದ್ದಳು. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಕಳವಳಗೊಂಡ ಪೋಷಕರು ಹಾವೇರಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಅರೆಬೆಂದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದೆ. ಸ್ಥಳಕ್ಕೆ ಎಸ್‍ಪಿ ಕೆ.ಪರಶುರಾಮ, ಡಿವೈಎಸ್ಪಿ ಕುಮಾರಪ್ಪ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಅತ್ಯಾಚಾರ ಕೊಲೆ, ಶಂಕೆ
ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ರೇಣುಕಾ ಪಾಟೀಲ್ ರನ್ನು ದುಷ್ಕರ್ಮಿಗಳು ಅಪಹರಿಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರ ಮಾಡಿ ಜೀವಂತ ಸುಟ್ಟುಹಾಕಿದ್ದಾರೆ ಎಂದು ಎನ್ನಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


