ಫೇಸ್ ಬುಕ್ ಮುಖಾಂತರ ಯುವತಿಗೆ ಕಿರುಕುಳ: ವ್ಯಕ್ತಿಯ ಬಂಧನ
ಸಾಮಾಜಿಕ ಜಾಲತಾಣ ಫೇಸ್ ಬುಕ್ ಮುಖಾಂತರ ಆರು ತಿಂಗಳಿಂದಲೂ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ವ್ಯಕ್ತಿಯೊಬ್ಬನಿಗೆ ಯುವತಿ ಕುಟುಂಬ ಸದಸ್ಯರು ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಬಸವೇಶ್ವನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮುಖಾಂತರ ಆರು ತಿಂಗಳಿಂದಲೂ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ವ್ಯಕ್ತಿಯೊಬ್ಬನಿಗೆ ಯುವತಿ ಕುಟುಂಬ ಸದಸ್ಯರು ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಬಸವೇಶ್ವನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹೋಟೆಲ್ ನೌಕರ ಸಿದ್ದು ಗೌಡ ಬಂಧಿತ ಆರೋಪಿ. ಮೈಸೂರಿನಿಂದ ಬಂದಿದ್ದ ಈತ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಪ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾನೆ ಅವಳು ಅದನ್ನು ತಿರಸ್ಕರಿಸಿದ ಕಾರಣ ಅಶ್ಲೀಲ ಸಂದೇಶಗಳನ್ನು ಅವಳ ಬಳಿಗೆ ಕಳುಹಿಸಲು ಪ್ರಾರಂಭಿಸಿದ್ದಾನೆ.
ಇದರಿಂದ ಬೇಸತ್ತ ಯುವತಿ ಸೈಬರ್ ಅಪರಾಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಯುವತಿಯ ಪೋಟೋವನ್ನು ಆರೋಪಿ ತನ್ನ ಫೇಸ್ ಬುಕ್ ಟೈಮ್ ಲೈನ್ ನಲ್ಲಿ ಹಾಕಿಕೊಂಡು ಎಂದು ದೂರುದಾರರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾತುಕತೆಯ ನೆಪದಲ್ಲಿ ಪೋನ್ ಮಾಡಿ ಕರೆಯಿಸಿಕೊಂಡ ಯುವತಿಯ ಪೋಷಕರು ಆತನ ಮೇಲೆ ಥಳಿಸಿದ್ದಾರೆ. ಬಳಿಕ ತಮ್ಮ ವಶಕ್ಕೆ ಒಪ್ಪಿಸಲಾಯಿತು ಎಂದು ಅವರು ಹೇಳಿದ್ದಾರೆ.
ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆಗಾಗಿ ಸೈಬರ್ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


