ಕನ್ನಡ ಶಾಲೆಗಳಿಗೆ ಮಲಯಾಳಿ ಶಿಕ್ಷಕರ ನೇಮಕ: ಗಡಿನಾಡು ಕನ್ನಡಿಗರಿಗೆ ಕಾಸರಗೋಡಿನಲ್ಲಿ ಅನ್ಯಾಯ
ಗಡಿನಾಡಿನ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕು ಹಾಗೂ ಜಿಲ್ಲೆಯಲ್ಲಿ ಕನ್ನಡಿಗರ ಹಿತ ಕಾಪಾಡಬೇಕೆಂದು..

Published On :
ಮಂಗಳೂರು: ಗಡಿನಾಡಿನ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕು ಹಾಗೂ ಜಿಲ್ಲೆಯಲ್ಲಿ ಕನ್ನಡಿಗರ ಹಿತ ಕಾಪಾಡಬೇಕೆಂದು ಆಗ್ರಹಿಸಿ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಕರ್ನಾಟಕ ಸರಕಾರವು ಸಿಇಟಿ ಮುಂತಾದ ಉನ್ನತ ಶಿಕ್ಷಣದ ಪ್ರವೇಶಾತಿ ಪರೀಕ್ಷೆ ನಡೆಸುವ ಸಂದರ್ಭ ಗಡಿನಾಡು ಕನ್ನಡಿಗರಿಗೆ ಮೀಸಲಾತಿ ನೀಡಿದೆಯಾದರೂ, ಈ ಮೀಸಲಾತಿಯ ದುರ್ಬಳಕೆಯಾಗುತ್ತಿದೆ. ಕನ್ನಡಿಗರಲ್ಲದವರು ಅಕ್ರಮ ಮಾರ್ಗದ ಮೂಲಕ ಪ್ರಮಾಣಪತ್ರ ಹಾಜರುಪಡಿಸಿ ಪ್ರವೇಶಾತಿ ಗಿಟ್ಟಿಸಿಕೊಳ್ಳುತ್ತಿರುವುದರಿಂದ ಅರ್ಹರು ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದೆ.
ಕಾಸರಗೋಡಿನಲ್ಲಿ ಕನ್ನಡಕ್ಕೆ ಸಂವಿಧಾನದ ಬದ್ದ ಪ್ರತ್ಯೇಕ ಮಾನ್ಯತೆಯಿದೆ. ಕಾಸರಗೋಡು ಪ್ರದೇಶದಲ್ಲಿ ಸರಕಾರಿ ಸುತ್ತೋಲೆಗಳನ್ನು ಕನ್ನಡದಲ್ಲೇ ನೀಡಬೇಕು. ಕನ್ನಡ ಶಾಲೆಗಳಿಗೆ ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಬೇಕು. ಅಂಗಡಿಗಳಲ್ಲಿ ಕನ್ನಡದಲ್ಲೇ ನಾಮಫಲಕ ಹಾಕಬೇಕು ಎಂದು ಆಗ್ರಹಿಸಿದೆ,
ಕಾಸರಗೋಡು ಜಿಪಂ ಸದಸ್ಯ ಹರ್ಷದ್ ವರ್ಕಾಡಿ ಮಾತನಾಡಿ, ಕಾಸರಗೋಡು ಕರ್ನಾಟಕದ್ದೇ ಭಾಗ. ಕನ್ನಡ ಭಾಷೆ ಕಲಿಸಲು ಮಲಯಾಳಿ ಶಿಕ್ಷಕರನ್ನು ನೇಮಿಸುವುದು ಸರಿಯಲ್ಲ. ಕನ್ನಡಿಗರ ಅಸ್ತಿತ್ವದ ಹೋರಾಟಕ್ಕೆ ಕರ್ನಾಟಕದ ಬೆಂಬಲ ಬೇಕು. ಇಲ್ಲಿ ಸಂವಿಧಾನಬದ್ಧವಾಗಿ ಸಿಗಬೇಕಾದ ಸವಲತ್ತುಗಳು ಜನರಿಗೆ ಸಿಗಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರತಿಭಟನೆprotestಕಾಸರಗೋಡುKasargodKannadiga studentsKannada Horata Samithiಕನ್ನಡಿಗ ವಿದ್ಯಾರ್ಥಿಗಳುಕನ್ನಡ ಹೋರಾಟ ಸಮಿತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


