ರಾಜ್ಯ

ಕಲಬುರಗಿ: ಕ್ಲಬ್ ಮೇಲೆ ಪೊಲೀಸರ ದಾಳಿ, 18 ಮಂದಿ ಬಂಧನ

ಕಲಬುರಗಿ ನಗರದ ಕ್ಲಬ್ ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ 18 ಮಂದಿಯನ್ನು ಬಂಧಿಸಿದ್ದಾರೆ.

ಕಲಬುರಗಿ: ಕ್ಲಬ್ ಮೇಲೆ ಪೊಲೀಸರ ದಾಳಿ, 18 ಮಂದಿ ಬಂಧನ
ಆರೋಪಿಗಳು
Published On :

ಕಲಬುರಗಿ: ಕಲಬುರಗಿ ನಗರದ ಕ್ಲಬ್  ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು  ಅಕ್ರಮ ಜೂಜಾಟದಲ್ಲಿ ತೊಡಗಿದ್ದ 18 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರಿಂದ 70 ಸಾವಿರ ರೂಪಾಯಿ ನಗದು ಹಾಗೂ 17  ಮೊಬೈಲ್  ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

 ಇತ್ತೀಚಿಗೆ ಕಲಬುರಗಿ ನಗರದಲ್ಲಿ  ಜೂಜಾಟದ ಅಡ್ಡೆಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು,  ರಾತ್ರಿ ವೇಳೆಯಲ್ಲಿ  ಹೆಚ್ಚಾಗಿ ಅಕ್ರಮವಾಗಿ ಜೂಜಾಟ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕ್ಲಬ್ ಮೇಲೆ ದಾಳಿ ನಡೆಸಿದ್ದು,  ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.