ಮಂಡ್ಯ: ಭೀಕರ ಅಪಘಾತದಲ್ಲಿ ಛಿದ್ರ ಛಿದ್ರಗೊಂಡ ಬೈಕ್ ಸವಾರರ ಮೃತದೇಹ!
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಮೃತಪಟ್ಟಿದ್ದು ಡಿಕ್ಕಿ ರಭಸಕ್ಕೆ ಸವಾರರ ಮೃತದೇಹ...

Published On :
ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಮೃತಪಟ್ಟಿದ್ದು ಡಿಕ್ಕಿ ರಭಸಕ್ಕೆ ಸವಾರರ ಮೃತದೇಹ ಛಿದ್ರ ಛಿದ್ರಗೊಂಡು ರಸ್ತೆಯಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಅಪಘಾತದ ಬಳಿಕ ಲಾರಿಯನ್ನು ನಿಲ್ಲಿಸಿ ಪರಾರಿಯಾಗುತ್ತಿದ್ದ ಕುಡುಕ ಲಾರಿ ಚಾಲಕನನ್ನು ಸ್ಥಳೀಯರು ಹಿಡಿದು ಹಿಗ್ಗಾ ಮುಗ್ಗಾ ಥಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರ ಮೃತದೇಹ ಲಾರಿ ಚಕ್ರಕ್ಕೆ ಸಿಲುಕಿ ಸುಮಾರು 250 ಮೀಟರ್ ವರೆಗೆ ಎಳೆದುಕೊಂಡಿದ್ದು ರಸ್ತೆ ಎಲ್ಲಾ ರಕ್ತಮಯವಾಗಿದ್ದು ಸವಾರರ ಗುರುತು ಸಿಗದಷ್ಟು ಕುರೂಪವಾಗಿದೆ.
ಬೈಕ್ ಸವಾರರು ಯಾರು ಎಲ್ಲಿಯವರು, ಎಲ್ಲಿಗೆ ಹೋಗುತ್ತಿದ್ದರು ಎಂಬುದು ಇನ್ನು ತಿಳಿದಿಲ್ಲ. ಮಂಡ್ಯ ಗ್ರಾಮಾಂತರ ಪೊಲೀಸರು ಅಪಘಾತ ಸ್ಥಳದಲ್ಲಿ ಬಿಡು ಬಿಟ್ಟಿದ್ದು ಛಿದ್ರ ಛಿದ್ರವಾಗಿ ಬಿದ್ದಿರುವ ದೇಹದ ತುಂಡುಗಳನ್ನು ಕವರ್ ಗೆ ತುಂಬಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


