ಮೈಸೂರು-ಬೆಂಗಳೂರು ರಸ್ತೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ನಾಲ್ವರ ಪತ್ತೆ, ಆಸ್ಪತ್ರೆಗೆ ದಾಖಲು
ಮೈಸೂರು-ಬೆಂಗಳೂರು ಮಾರ್ಗವಾಗಿ ಶ್ರೀರಂಗಪಟ್ಟಣದ ರಾಗಿಮುದ್ದನಹಳ್ಳಿ ಗೇಟ್ ಹೊರಗೆ ನಿಲುಗಡೆ ...

ಬೆಂಗಳೂರು: ಮೈಸೂರು-ಬೆಂಗಳೂರು ಮಾರ್ಗವಾಗಿ ಶ್ರೀರಂಗಪಟ್ಟಣದ ರಾಗಿಮುದ್ದನಹಳ್ಳಿ ಗೇಟ್ ಹೊರಗೆ ನಿಲುಗಡೆ ಮಾಡಿದ್ದ ಮಾರುತಿ ವ್ಯಾನ್ ಒಳಗೆ ಒಂದೇ ಕುಟುಂಬದ ನಾಲ್ವರು ಗಂಭೀರ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.
ಅವರನ್ನು ಮರಿಗೌಡ ಅವರ ಪತ್ನಿ ರಜನಿ ಮತ್ತು ಮಕ್ಕಳಾದ ಚಂದ್ರು ಮತ್ತು ಚೇತನ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿಯವರಾಗಿದ್ದಾರೆ. ನಂತರ ಅವರನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾರಿಹೋಕರು ದಾಖಲಿಸಿದರು. ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


