ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ, ಅದಕ್ಕಾಗಿ ದೇವರ ಮೊರೆ ಹೋಗುತ್ತೇನೆ: ಸಿಎಂ ಕುಮಾರಸ್ವಾಮಿ
ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿದೆ, ಹೀಗಾಗಿ ದೇವರ ಮೊರೆ ಹೋಗುತ್ತಿದ್ದೇನೆ ಎಂದು ...

ಧರ್ಮಸ್ಥಳ: ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿದೆ, ಹೀಗಾಗಿ ದೇವರ ಮೊರೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿರುವುದರಿಂದ ದೇವರ ಮೊರೆ ಹೋಗಬೇಕಾಗಿದೆ, ನಿನ್ನೆ ತಮ್ಮ ಕುಟುಂಬ ಸದಸ್ಯರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರಾವಣ ಮಾಸದ ಆರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳ ದೇಗುಲಕ್ಕೆ ಬಂದಿರುವುದಾಗಿ ತಿಳಿಸಿದರು. ಇಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಒಣದ್ರಾಕ್ಷಿಯಿಂದ ತುಲಾಭಾರ ಸೇವೆ ಸಲ್ಲಿಸಿ ಆಶ್ಲೇಷ ಬಲಿ ಮುಗಿಸಿ ನೈವೇದ್ಯ ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಶ್ರಾವಣ ಮಾಸದ ಆರಂಭದ ಸೋಮವಾರವಾದ ನಿನ್ನೆ ದಿನವಿಡೀ ಮುಖ್ಯಮಂತ್ರಿ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವುದು ಮತ್ತು ವಿಶೇಷ ಪೂಜೆ ಸಲ್ಲಿಸುವುದರಲ್ಲಿ ನಿರತರಾಗಿದ್ದರು.
ನಿನ್ನೆ ನಸುಕಿನ ಜಾವ ಸೂರ್ಯ ಉದಯಿಸುತ್ತಿದ್ದಂತೆ ತಮ್ಮ ಹುಟ್ಟೂರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಶ್ರಾವಣ ಮಾಸದ ಮೊದಲ ಸೋಮವಾರ ಈ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಹಲವು ವರ್ಷಗಳಿಂದ ದೇವೇಗೌಡ ಕುಟುಂಬ ಮಾಡಿಕೊಂಡು ಬರುತ್ತಿದೆ.
ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮ ದೇವೇಗೌಡ, ಅನಿತಾ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಪೂಜಾ ವಿಧಿವಿಧಾನಗಳಲ್ಲಿ ಭಾಗಿಯಾದರು. ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮತ್ತು ಸಂಕಲ್ಪ ಮಾಡಿಸಿದರು. ರೇವಣ್ಣ ಅವರ ಪತ್ನಿ ಭವಾನಿ ಮತ್ತು ಪುತ್ರ ಭಾಗಿಯಾಗಿರಲಿಲ್ಲ. ಶೃಂಗೇರಿಯ ಐವರು ಅರ್ಚಕರು ದೇವೇಗೌಡರ ಕುಟುಂಬದವರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿ ಫಾರ್ಮ್ ನೀಡುವ ಅಭ್ಯರ್ಥಿಗಳ ಹೆಸರಿನಲ್ಲಿ ಪೂಜೆ ಮಾಡಿಸಿದ್ದು ವಿಶೇಷವಾಗಿತ್ತು. ಶ್ರಾವಣ ಸೋಮವಾರದಲ್ಲಿ ಪೂಜೆ ಸಲ್ಲಿಸಿದರೆ ನಾವು ಅಂದುಕೊಂಡ ಕಾರ್ಯಗಳು ನೆರವೇರುತ್ತವೆ ಎಂಬುದು ನಂಬಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


