ರಾಜ್ಯ

ನೆರೆ ಹಾವಳಿಗೆ ತುತ್ತಾಗಿರುವ ಜಿಲ್ಲೆಗಳಿಗೆ 200 ಕೋಟಿ ರೂ ಪರಿಹಾರ: ಸಿಎಂ ಕುಮಾರಸ್ವಾಮಿ

ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಅವರು 200 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

ನೆರೆ ಹಾವಳಿಗೆ ತುತ್ತಾಗಿರುವ ಜಿಲ್ಲೆಗಳಿಗೆ 200 ಕೋಟಿ ರೂ ಪರಿಹಾರ: ಸಿಎಂ ಕುಮಾರಸ್ವಾಮಿ
ಸಂಗ್ರಹ ಚಿತ್ರ
Published On :
ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಅವರು 200 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.
ಜೀವನದಿ ಕಾವೇರಿ, ಶರಾವತಿ, ಕಪಿಲಾ ಸೇರಿದಂತೆ ಮಲೆನಾಡಿನ ವಿವಿಧ ನದಿ ಪಾತ್ರಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮುಂದುವರೆದಿರುವಂತೆಯೇ ನೆರೆ ಪೀಡಿತ ಜಿಲ್ಲೆಗಳಿಗೆ ಸಿಎಂ ಕುಮಾರಸ್ವಾಮಿ 200 ಕೋಟಿ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಕೊಡಗು-ಮಂಗಳೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು ಅಲ್ಲಿನ ರಸ್ತೆಗಳೆಲ್ಲ ನೀರಿನಿಂದ ತುಂಬಿವೆ. ಗುರುವಾರದಿಂದ ಸುರಿಯುತ್ತಿರುವ ಮಳೆ ಗಾಳಿಗೆ ಭೂ ಕುಸಿತದಿಂದ ಸಂಚಾರಕ್ಕೂ ತಡೆಯುಂಟಾಗಿದೆ. ಜನರೆಲ್ಲ ಮನೆಯಲ್ಲೇ ಇರವಂತಾಗಿದ್ದು, ಹೊರಗಿನ ಪ್ರಪಂಚದ ಸಂಪರ್ಕವೇ ಕಡಿತವಾಗಿದೆ. ಮಡಿಕೇರಿಯಲ್ಲೂ ಇದೇ ಪರಿಸ್ಥಿತಿ ಇದೆ. ಭೂಕುಸಿತದಿಂದ ಅಪಾಯದಲ್ಲಿರುವವರನ್ನೆಲ್ಲ ಪಾರು ಮಾಡಲು ಪ್ರಯತ್ನಗಳು ನಡೆಯುತ್ತಿವೆ.
ಇನ್ನು ಈ ಕುರಿತಂತೆ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಈಗಾಗಲೇ ನೆರೆ ಪೀಡಿತ ಜಿಲ್ಲೆಗಳಲ್ಲಿ 29 ನಿರಾಶ್ರಿತ ಕ್ಯಾಂಪ್​ ಗಳನ್ನು ನಿರ್ಮಿಸಲಾಗಿದ್ದು, ಇಲ್ಲಿ 1,755 ಜನರು ಅಲ್ಲಿ ಆಶ್ರಯ ಪಡೆದಿದ್ದಾರೆ. ಅಂತೆಯೇ ಹಾನಿಗೀಡಾದ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂಪಾಯಿ ನೀಡಲಾಗುವುದು ಎಂದು ಹೇಳಿದ್ದಾರೆ.
ಕೊಡಗಿನಲ್ಲಿ ವಾಡಿಕೆಗಿಂತ ಶೇ. 175, ಉಡುಪಿಯಲ್ಲಿ ಶೇ.62, ಶಿವಮೊಗ್ಗದಲ್ಲಿ ಶೇ.117, ಚಿಕ್ಕಮಗಳೂರಿನಲ್ಲಿ ಶೇ.170, ಹಾಸನದಲ್ಲಿ ಶೇ.130 ಹಾಗೂ ಉತ್ತರ ಕನ್ನಡದಲ್ಲಿ ಶೇ.81ರಷ್ಟು ಹಚ್ಚುವರಿ ಮಳೆಯಾಗಿದೆ. ಕೊಡಗಿನಲ್ಲಿ ಇಬ್ಬರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಈ ಹಿನ್ನೆಲೆಯಲ್ಲಿ ಅಲ್ಲಿನ ಹಾನಿಗಳನ್ನು ತಡೆಯಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.