ಪ್ರಕೃತಿ ವಿಕೋಪಕ್ಕೆ ಕೊಡಗು ತತ್ತರ: ಕುಸಿಯುತ್ತಿರುವ ಬೆಟ್ಟಗಳು, ಕೊಡಗು-ಮಂಗಳೂರು ಹೆದ್ದಾರಿ ಬಂದ್
ಮಳೆಯ ಆರ್ಭಟಕ್ಕೆ ಕೊಡಗು ಜಿಲ್ಲೆ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಎಲ್ಲೆಂದರಲ್ಲಿ ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಸಾವಿರಾರು ಜನರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಮಕನೂರು ಪ್ರದೇಶದಲ್ಲಿರುವ...

Published On :
ಬೆಂಗಳೂರು: ಮಳೆಯ ಆರ್ಭಟಕ್ಕೆ ಕೊಡಗು ಜಿಲ್ಲೆ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಎಲ್ಲೆಂದರಲ್ಲಿ ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಸಾವಿರಾರು ಜನರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಮಕನೂರು ಪ್ರದೇಶದಲ್ಲಿರುವ ಕೊಡಲು-ಮಂಗಳೂರಿನ ಹೆದ್ದಾರಿಗಳು ಸಂಪೂರ್ಣವಾಗಿ ಬಂದ್ ಆಗಿವೆ ಎಂದು ಶುಕ್ರವಾರ ತಿಳಿದುಬಂದಿದೆ.
ಮಳೆಯ ಆರ್ಭಟಕ್ಕೆ ಹಲವೆಡೆ ಸಂಭವಿಸಿದ ದುರಂತದಲ್ಲಿ ಗುರುವಾರ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಮಡಿಕೇರಿ ತಾಲೂಕುಗಳಲ್ಲಿ ಐವರು ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ ಗೋಡೆ ಕುಸಿದುಬಿದ್ದ ಪರಿಣಾಮ ಮೂವರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನಲ್ಲಿ ಮನೆಯ ಗೋಡೆ ಕುಸಿದು ಬಿದ್ದು 5 ವರ್ಷದ ಮಗು ಮೃತಪಟ್ಟಿದೆ. ಮಡಿಕೇರಿಯ ಮುತ್ತಪ್ಪ ದೇವಾಲಯದ ಬಳಿ ಮನೆ ಕುಸಿದು ರಸ್ತೆಗೆ ಬಂದು ನಿಂತಿದೆ. ಅಪಾಯ ತಿಳಿದು ಮನೆಯವರನ್ನು ಗಂಜಿಕೇಂದ್ರಕ್ಕೆ ಸ್ಥಳಾಂತರಿಸಿದ ಕಾರಣ ಅಪಾಯಗಳು ಸಂಭವಿಸಿಲ್ಲ. ತೇವಾಂಶ ಹೆಚ್ಚಾಗಿ ಗುಡ್ಡ ಕುಸಿದ ಪ್ರಕರಣಗಳು ಹೆಚ್ಚಾಗುತ್ತಿದ್ದು ಬೆಟ್ಟಗುಡ್ಡಗಳಲ್ಲಿ ವಾಸವಿದ್ದ ಸಾವಿರಾರು ಜನರನ್ನು ಗಂಜಿಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ಮಲೆನಾಡಿನಲ್ಲಿ ಭೂಕುಸಿತಗೊಂಡಿದ್ದು ಪರಿಣಾಮ ರಕ್ಷಣಾ ಕಾರ್ಯಾಚರಣೆಗಳಿಗೆ ತೊಡಕು ಎದುರಾಗಿದೆ. 300ಕ್ಕೂ ಹೆಚ್ಚಿ ಮಂದಿ ರಕ್ಷಣಾ ಕಾರ್ಯಾಚರಣೆಗಳಿಗಾಗಿ ಕಾದು ಕುಳಿತಿದ್ದಾರೆ. ಗುಡ್ಡ ಕುಸಿತಗೊಂಡ ಪರಿಣಾಮ ರಸ್ತೆಗಳು ಸಂಪೂರ್ಣವಾಗಿ ನಾಶಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಗಳಿಗೆ ಸಮಸ್ಯೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ 8.30 ರಿಂದ ರಾತ್ರಿ 8.30ರವರೆಗೂ 60-70 ಎಂಎಂ ಮಳೆಯಾಗಿದೆ.
ಮಳೆಯ ಪರಿಣಾಮ ರೈಲು ಸಂಚಾರಗಳ ಮೇಲೆ ಗಂಭೀರವಾದ ಪರಿಣಾಮ ಬೀರಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ದೇವಾಲಯ ಕುಕ್ಕೆ ಸುಬ್ರಮಣ್ಯ ದೇಗುಲದ ಸುತ್ತಲೂ ನೀರು ತಂಬಿದೆ. ಕಬಿನಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು, ಮೈಸೂರು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಪ್ರವಾಹದ ಎಚ್ಚರಿಕೆಗಳನ್ನು ನೀಡಿದ್ದಾರೆಂದು ತಿಳಿದುಬಂದಿದೆ.
ಜನರು ಎಲ್ಲಿಯೂ ಹೋಗಲು ಸಾಧ್ಯವಾಗುತ್ತಿಲ್ಲ. ಮಳೆಯಿಂದಾಗಿ ಸೃಷ್ಟಿಯಾಗಿರುವ ಅವಾಂತರಗಳಿಂದಾಗಿ ಜನರು ಮನೆಗಳಲ್ಲಿಯೇ ಸಿಲುಕಿ ಹಾಕಿಕೊಂಡಿದ್ದಾರೆ. ಇಂತಹ ಮಳೆಯನ್ನು ಈ ಹಿಂದೆಂದೂ ನೋಡಿರಲಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


