ರಾಜ್ಯ

ಕಲಬುರಗಿ: ಮನೆ ಗೋಡೆ ಕುಸಿದು ಬಿದ್ದು ಮೂವರು ಸಾವು

ಜಿಲ್ಲೆಯ ಅಳಂದ ತಾಲ್ಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ಅವ್ಯಾಹತ ಮಳೆಯಿಂದ ಮನೆಯೊಂದು ಕುಸಿದು ...

ಕಲಬುರಗಿ: ಮನೆ ಗೋಡೆ ಕುಸಿದು ಬಿದ್ದು ಮೂವರು ಸಾವು
ಹಿತ್ತಲಶಿರೂರು ಗ್ರಾಮದಲ್ಲಿ ಮಳೆಗೆ ಕುಸಿದು ಬಿದ್ದ ಮನೆ
Published On :

ಕಲಬುರಗಿ: ಜಿಲ್ಲೆಯ ಅಳಂದ ತಾಲ್ಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ಅವ್ಯಾಹತ ಮಳೆಯಿಂದ ಮನೆಯೊಂದು ಕುಸಿದು ಬಿದ್ದು ಮಹಿಳೆ ಹಾಗೂ ಅವರ ಇಬ್ಬರು ಪುತ್ರಿಯರು ಸ್ಥಳದಲ್ಲಿಯೇ ಅಸುನೀಗಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಲಕ್ಷ್ಮೀಬಾಯಿ ಒಡೆಯರ್(35 ವರ್ಷ) ಮತ್ತು ಅವರ ಇಬ್ಬರು ಮಕ್ಕಳಾದ ಅಂಬಿಕಾ (11 ವರ್ಷ), ಶಿವಮ್ಮ (9 ವರ್ಷ) ಎಂದು ಗುರುತಿಸಲಾಗಿದೆ. ಮನೆ ಮಾಲಿಕ ಪ್ರಭು ಒಡೆಯರ್ ಗಾಯಗೊಂಡಿದ್ದು ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊನ್ನೆ ಬುಧವಾರ ರಾತ್ರಿಯಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಪ್ರಭು ಒಡೆಯರ್ ಅವರ ಮನೆಯ ಗೋಡೆ ಕುಸಿಯಿತು. ಈ ಸಂದರ್ಭದಲ್ಲಿ ಎಲ್ಲರೂ ನಿದ್ದೆ ಮಾಡುತ್ತಿದ್ದರು. ಆ ದಿನ ರಾತ್ರಿ ಗ್ರಾಮದಲ್ಲಿ 64.5 ಮಿಲಿ ಮೀಟರ್ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.