ವಿಡಿಯೋ: ತೆರವು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಕುಸಿದ ಗುಡ್ಡ, ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಪಾರು!
ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿರುವ ಕಾಫಿ ನಾಡು ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಭೂ ಕುಸಿತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Published On :
ಕೊಡಗು: ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿರುವ ಕಾಫಿ ನಾಡು ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಭೂ ಕುಸಿತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕೊಡಗಿನಲ್ಲಿ ಇದೀಗ ಗುಡ್ಡ ಕುಸಿತ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಕುಸಿದ ಒಂದು ಗುಡ್ಡವನ್ನು ತೆರವು ಮಾಡುತ್ತಿರುವಾಗಲೇ ಮತ್ತೊಂದು ಗುಡ್ಡ ಜಾರಿಕೊಂಡು ಬೀಳುತ್ತಿದೆ. ಗುರುವಾರ ಕೊಡಗು - ಮಂಗಳೂರು ಮಾರ್ಗದಲ್ಲಿ ಗುಡ್ಡ ಕುಸಿದು ಸಂಚಾರವೇ ಸ್ತಬ್ಧವಾಗಿತ್ತು. ಶುಕ್ರವಾರ ರಾತ್ರಿ ಜೋಡುಪಾಲ ಎಂಬಲ್ಲಿ ಗುಡ್ಡವೊಂದು ಕುಸಿದಿದೆ.
ಈ ವೇಳೆ ರಸ್ತೆ ಮೇಲೆ ಬಿದ್ದಿದ್ದ ಮಣ್ಣನ್ನು ತೆರವು ಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾಗಲೇ ಹಿಂಬದಿಯಲ್ಲಿ ಮತ್ತೊಂದು ಗುಡ್ಡ ದಿಢೀರ್ ಕುಸಿದು ಆತಂಕ ಸೃಷ್ಟಿ ಮಾಡಿತ್ತು. ಆದರೆ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ವಿಡಿಯೋವನ್ನು ಸ್ವತಃ ಮುಖ್ಯಮಂತ್ರಿಗಳ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
ಕೇಂದ್ರದಿಂದ ಹೆಚ್ಚುವರಿ ರಕ್ಷಣಾ ಸಿಬ್ಬಂದಿ ರವಾನೆ, ಕೊಡಗಿಗೆ ಬಂದಿಳಿದ ಸೇನಾ ಹೆಲಿಕಾಪ್ಟರ್
ಪ್ರವಾಹ ಪೀಡಿತ ಕೊಡಗಿನಲ್ಲಿ ಕೈಗೊಳ್ಳಬೇಕಾದ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಗತ್ಯ ಸವಲತ್ತು ಒದಗಿಸಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಚಿವರನ್ನು ಅಭಿನಂದಿಸಿದ್ದಾರೆ. ಜತೆಗೆ, ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಲು, ವೈಮಾನಿಕ ಸಮೀಕ್ಷೆ ನಡೆಸಲು ವಾಯುಪಡೆಯ ಹೆಲಿಕಾಪ್ಟರ್ ಒದಗಿಸುವಂತೆಯೂ ಅವರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸುಮಾರು 200ಕ್ಕೂ ಅಧಿಕ ಮಂದಿಯ ಎನ್ ಡಿಆರ್ ಎಫ್ ತಂಡವನ್ನು ರಾಜ್ಯಕ್ಕೆ ರವಾನೆ ಮಾಡಿದೆ. ಅಲ್ಲದೆ ಇಂದು ಬೆಳಗ್ಗೆ ಸೇನೆಯ ಒಂದು ಹೆಲಿಕಾಪ್ಟರ್ ಬಂದಿಳಿದಿದ್ದು, ಪ್ರಸ್ತುತ ಪ್ರತೀಕೂಲ ಹವಾಮಾನ ಇರುವುದರಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಲ್ಲ. ಹವಾಮಾನ ಬದಲಾಗುತ್ತಿದ್ದಂತೆಯೇ ಕಾಪ್ಚರ್ ಕಾರ್ಯಾಚರಣೆಗೆಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


