ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ - ಡಿಕೆ ಶಿವಕುಮಾರ್
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು:ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ 36.55 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಬೇಡಿಕೆ ಹಾಕಲಾಗಿತ್ತು. ಆದರೆ, ನ್ಯಾಯಾಧೀಕರಣ 13.42 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಆದ್ದರಿಂದ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಂಬಂಧ ಕಾನೂನು ತಜ್ಞರ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಆಗಸ್ಟ್ 14 ರಂದು ತೀರ್ಪು ನೀಡಿದ ನ್ಯಾಯಾಧೀಕರಣ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿತ್ತು. ಇದರ ವಿರುದ್ಧ ಗೋವಾ ಸರ್ಕಾರ ಕೂಡಾ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
ಕೆಆರ್ ಎಸ್ , ಕಬಿನಿ, ತುಂಗಭದ್ರಾ ಜಲಾಶಯಗಳ ನೀರಿನ ಒಳಹರಿವು ಹೆಚ್ಚಳದಿಂದ ಅಲ್ಪಪ್ರಮಾಣದ ಹಾನಿಯಾಗಿದ್ದು, ಕಾಲುವೆ ದುರಸ್ಥಿಗೊಳಿಸಿ ಕೆರೆಗಳನ್ನು ಭರ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


