ಪ್ರವಾಹ ಭೀತಿ: ರಾಜ್ಯದ ಖ್ಯಾತ ರಂಗನತಿಟ್ಟು ಪಕ್ಷಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ
ಕಾವೇರಿ ಕಣಿವೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ರಾಜ್ಯದ ಖ್ಯಾತ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿದರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

Published On :
ಮಂಡ್ಯ: ಕಾವೇರಿ ಕಣಿವೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ರಾಜ್ಯದ ಖ್ಯಾತ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿದರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಕೊಡಗು, ಮಡಿಕೇರಿ ಮತ್ತು ಭಾಗಮಂಡಲಗಳಲ್ಲಿ ಕಳೆದೊಂದು ವಾರದಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಕೆಆರ್ಎಸ್ ಜಲಾಶಯಕ್ಕೆ ವಿಪರೀತ ನೀರು ಹರಿದುಬರುತ್ತಿದೆ. ಜಲಾಶಯದಿಂದ ನಿತ್ಯ ಸುಮಾರು 1.25 ಕ್ಯೂಸೆಕ್ಸ್ ಅಡಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಪಕ್ಷಿಧಾಮ ರಂಗನತಿಟ್ಟು ಜಲಾವೃತಗೊಂಡಿದೆ.
ಭಾರಿ ಪ್ರಮಾಣದ ನೀರನ್ನು ಡ್ಯಾಂನಿಂದ ನದಿಗೆ ಬಿಡುಗಡೆ ಮಾಡುತ್ತಿರುವುದರಿಂದ ರಂಗನತಿಟ್ಟು ಜಲಾವೃತಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪಕ್ಷಿಧಾಮಕ್ಕೆ ಪ್ರವಾಸಿಗರ ಮತ್ತು ಪಕ್ಷಿ ವೀಕ್ಷಕರ ಭೇಟಿ ನಿಷೇಧಿಸಲಾಗಿದೆ. ಈ ಸಂಬಂಧ ಮೂರು ದಿನಗಳ ಹಿಂದೆಯೇ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ನಡುವೆ ಕಾವೇರಿಯ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದ್ದು ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯ ಮುಂಭಾಗದಲ್ಲಿ ಗೋಡೆ ನಿರ್ಮಾಣ ಮಾಡಿರುವ ಸಂಚಾರ ಪೊಲೀಸರು ವಾಹನಗಳ ಸಂಚಾರವನ್ನು ತಡೆದಿದ್ದಾರೆ. ಅತ್ತ, ಚಾಮರಾಜನಗರದ ವೆಸ್ಲಿ ಸೇತುವೆಯೂ ಮುಳುಗಡೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಂಡ್ಯMandyaKRS DamKarnataka Floodsಕರ್ನಾಟಕ ಪ್ರವಾಹRanganathittu Bird Sanctuaryರಂಗನತಿಟ್ಟು ಪಕ್ಷಿಧಾಮಕೆಆರ್ ಎಸ್ ಡ್ಯಾಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


