ರಾಜ್ಯ

ಕೊಡಗು ಪ್ರವಾಹ : ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಮುಖ್ಯಮಂತ್ರಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎರಡನೇ ದಿನವಾದ ಇಂದು ಕೂಡಾ ಕೊಡಗಿನಲ್ಲಿ ಸುಮಾರು ಒಂದು ಗಂಟೆ 15 ನಿಮಿಷಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು.

ಕೊಡಗು ಪ್ರವಾಹ : ಮನೆ ಕಳೆದುಕೊಂಡವರಿಗೆ  5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಮುಖ್ಯಮಂತ್ರಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
Published On :

ಕೊಡಗು :ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಎರಡನೇ ದಿನವಾದ ಇಂದು ಕೂಡಾ ಕೊಡಗಿನಲ್ಲಿ ಸುಮಾರು ಒಂದು ಗಂಟೆ 15 ನಿಮಿಷಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು.

ಮೈಸೂರು ವಿಮಾನ ನಿಲ್ದಾಣದಿಂದ ಹೊರಟು ಸೋಮವಾರಪೇಟೆ, ಶುಂಠಿ ಕೊಪ್ಪ, ಮಾದಾಪುರ, ಮುಕ್ಕೋಡ್ಲು, ಹಾರಂಗಿ ಹಿನ್ನೀರು ಪ್ರದೇಶ,ಸಿದ್ದಾಪುರ, ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳ ಸಮೀಕ್ಷೆ ನಡೆಸಿದರು

 ಅವರ್ತಿ ಗ್ರಾಮದಲ್ಲಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಳೆಯಿಂದ ಮನೆ ಹಾನಿಗೀಡಾದ  ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ಮಳೆಯಿಂದ ಮನೆ ಹಾನಿಯಾದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಕುಮಾರಸ್ವಾಮಿ ನಿನ್ನೆ ಪ್ರಕಟಿಸಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,  ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸೇನಾ ಸಿಬ್ಬಂದಿ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೇ ತಿಂಗಳ 14 ರಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿ  ಗುಡ್ಡ ಕುಸಿತ ಉಂಟಾಗಿದೆ ಎಂದು ತಿಳಿಸಿದರು.
 ಪ್ರವಾಹದ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 15 ರಂದೇ  ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಮತ್ತು  ಶಿವಮೊಗ್ಗ ಜಿಲ್ಲೆಗಳಲ್ಲಿ ಹೈ ಆಲರ್ಟ್ ಘೋಷಿಸಲಾಗಿತ್ತು ಎಂದು ಅವರು ಹೇಳಿದರು.

ಲೋಕೊಪಯೋಗಿ  ಸಚಿವ ಹೆಚ್. ಡಿ. ರೇವಣ್ಣ  ಅವರ ಪರಿಹಾರದ ಮೇಲ್ವಿಚಾರಣೆ ವಹಿಸಿದ್ದು, ಹಾಲು ಉತ್ಪಾದಕರ ಒಕ್ಕೂಟದಿಂದ ಹಾಲು, ಅಕ್ಕಿ, ಬೆಳೆ,  ನೀಡಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ  ಹೇಳಿದರು.
ಈ ಮಧ್ಯೆ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಸೇನಾಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು ಈವರೆಗೆ 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿಯವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.