ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ವಿಗ್ರಹಗಳ ವಿರುದ್ಧ ಸಮರ ಸಾರಿದ ಬಿಬಿಎಂಪಿ
ಗಣೇಶ ಚತುರ್ತಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪ್ರಕೃತಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ವಿರುದ್ಧ ಸಮರ ಸಾರಲು ಮುಂದಾಗಿದೆ...

Published On :
ಬೆಂಗಳೂರು: ಗಣೇಶ ಚತುರ್ತಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪ್ರಕೃತಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ವಿರುದ್ಧ ಸಮರ ಸಾರಲು ಮುಂದಾಗಿದೆ.
ಪರಿಸರ ಮಾಲಿನ್ಯ ಮಂಡಳಿಯೊಂದಿಗೆ ಕೈಜೋಡಿಸಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಮೇಯರ್ ಮಂಜುನಾಥ್ ಪ್ರಸಾದ್ ಅವರು, ಗಣೇಶ ಮೂರ್ತಿಗಳ ಕುರಿತಂತೆ ಶಾಲೆ ಹಾಗೂ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ 150 ಮೊಬೈಲ್ ಟ್ಯಾಂಕ್ ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ಮಾಡಲಾದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲು ಎಲ್ಲಾ ಸ್ಥಳೀಯ ಅಧಿಕಾರಿಗಳು ನಮಗೆ ಸಹಾಯ ಮಾಡಲಿದ್ದಾರೆ. ಇಂತರ ವಿಗ್ರಹಗಳನ್ನು ತಯಾರು ಮಾಡಿರುವ ಘಟಕಗಳಿಗೆ ತದಂಡವನ್ನು ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಈ ಬಗ್ಗೆ ಸೂಚನೆಗಳನ್ನು ನೀಡಲಾಗಿದ್ದು, ಮೊಬೈಲ್ ಟ್ಯಾಂಕ್ ಗಳಲ್ಲಿಯೇ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತೆ ತಿಳಿಸಲಾಗಿದೆ. ಪ್ರತೀ ವಾರ್ಡ್ ನಲ್ಲಿಯೂ ನಾಲ್ಕು ಮೊಬೈಲ್ ಟ್ಯಾಂಕ್ ಗಳನ್ನು ಇರಿಸಲಾಗುತ್ತದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಪೊಲೀಸರು ಭದ್ರತೆ ನೀಡಲಿದ್ದಾರೆ. ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಕ್ರೇನ್ ಗಳನ್ನು ನೀಡಲಾಗುತ್ತದೆ. ಪ್ಲಾಸ್ಟರ್ ಪ್ಯಾರಿಸ್ ನಿಂದ ಪರಿಸರಕ್ಕೆ ಆಗುವ ಹಾನಿ ಕುರಿತಂತೆ ಶೀಘ್ರದಲ್ಲಿಯೇ ಘೋಷಣೆಗಳನ್ನು ಮಾಡಲಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BBMPಬಿಬಿಎಂಪಿganesha Festivalಗಣೇಶ ಚತುರ್ಥಿGanesha idolsPlaster of Parisಗಣೇಶ ವಿಗ್ರಹಪ್ಲಾಸ್ಟರ್ ಆಫ್ ಪ್ಯಾರಿಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


