ರಾಜ್ಯ

ಶಿಥಿಲ ಶಾಲಾ ಕಟ್ಟಡಗಳು: ಶಿಕ್ಷಣ ಇಲಾಖೆ ವಿರುದ್ಧ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿಥಿಲ ಶಾಲಾ ಕಟ್ಟಡಗಳು: ಶಿಕ್ಷಣ ಇಲಾಖೆ ವಿರುದ್ಧ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ
Published On :

ಬೆಂಗಳೂರು: ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ  ಸಂಬಂಧಿಸಿದಂತೆ  ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ಧ  ಸ್ವಯಂ ಪ್ರೇರಿತ  ಪ್ರಕರಣ ದಾಖಲಿಸಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅರಕೆರೆ ಗ್ರಾಮದ ಶಾಲೆ ಮತ್ತು   ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿನ ಮುನ್ಸಿಪಲ್  ಪ್ರೌಢಶಾಲೆಯ ಶಿಥಿಲಗೊಂಡ ಕಟ್ಟಡಗಳ ಬಗ್ಗೆ ಪತ್ರಿಕೆಯೊಂದರ ವರದಿ ಪ್ರಕಟಗೊಂಡ ನಂತರ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.

ಈ ವಿಚಾರದ ಬಗ್ಗೆ ಉನ್ನತ ಸಂಸ್ಥೆಗಳು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶೀಘ್ರದಲ್ಲಿಯೇ  ಶಿಥಿಲಗೊಂಡಿರುವ ಕಟ್ಟಡವನ್ನು  ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು  ಲೋಕಾಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.