ಕೊಡಗಿನ ಪ್ರವಾಹ ಪೀಡಿತ ಗ್ರಾಮ ದತ್ತು ಪಡೆಯುವೆ: ಪಲಿಮಾರು ಶ್ರೀ ಘೋಷಣೆ
ತೀವ್ರ ಅತಿವೃಷ್ಟಿಯಿಂದ ಅನೇಕ ಪ್ರಾಣಗಳನ್ನು, ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿರುವ ಕೊಡಗು ಜಿಲ್ಲೆಯ ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಪಲಿಮಾರು ಶ್ರೀ ಘೋಷಣೆ ಮಾಡಿದ್ದಾರೆ...

Published On :
ಉಡುಪಿ: ತೀವ್ರ ಅತಿವೃಷ್ಟಿಯಿಂದ ಅನೇಕ ಪ್ರಾಣಗಳನ್ನು, ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿರುವ ಕೊಡಗು ಜಿಲ್ಲೆಯ ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಪಲಿಮಾರು ಶ್ರೀ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಉಡುಪಿ ಕೃಷ್ಣ ಮಠದ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು, ಪ್ರವಾಹ ಪೀಡಿದ ಕೊಡಗು ಜಿಲ್ಲೆಯ ಒಂದು ಗ್ರಾಮವನ್ನು ದತ್ತು ಪಡೆದುಕೊಂಡು ಅದನ್ನು ಸಾರ್ವಜನಿಕರ ನೆರವಿನಿಂದ ಪುನರ್ ನಿರ್ಮಾಣ ಮಾಡುತ್ತೇವೆಂದು ಹೇಳಿದ್ದಾರೆ.
ಶಾಸ್ತ್ರಗಳಲ್ಲಿ ಹೇಳಿರುವಂತೆ ಅಷ್ಟ ಭಾವಪುರುಷಗಳಲ್ಲಿ ದಯೆ ಎಂಬುದು ಭಗವಂತನಿಗೆ ಅತ್ಯಂತ ಪ್ರಿಯವಾದುದು. ಆದ್ದರಿಂದ ಕಷ್ಟದಲ್ಲಿರುವವರಿಗೆ ಕರುಣೆ ಮತ್ತು ದಯೆಯಿಂದ ಸಹಾಯ ಮಾಡಿದರೆ ಅವರಲ್ಲಿರುವ ಭಗವಂತ ಸಂತುಷ್ಟನಾಗುತ್ತಾನೆ. ಕೊಡಗಿನಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಹೆಗಲು ಕೊಡುವುದು ದೇವರ ಪೂಜೆಯಷ್ಟೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Adoptದತ್ತುKodaguಕೊಡಗುಕೊಡಗು ಪ್ರವಾಹKarnataka Floodsvidyadheesha theertha swamijiPalimaru mathaವಿದ್ಯಾಧೀಶ ತೀರ್ಥ ಸ್ವಾಮೀಜಿಪಲಿಮಾರು ಮಠ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


