ಅನುಮಾನಗಳಿಗೆ ತೆರೆ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರದ್ದು ಸಹಜ ಸಾವು!
ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ...

Published On :
ಮಂಗಳೂರು: ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ.
ಶಿರೂರು ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ. ಸ್ವಾಮೀಜಿ ಸಾವಿನ ಕುರಿತಂತೆ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಳು ಪೊಲೀಸರ ಕೈ ಸೇರಿದ್ದು ಅದನ್ನು ಅನುಸರಿಸಿ ಮಣಿಪಾಲ ಕೆಎಂಸಿ ಆಸ್ಪತ್ರೆ ಅಂತಿಮ ವರದಿ ಸಲ್ಲಿಸಿದೆ.
ಸ್ವಾಮೀಜಿ ಲಿವರ್(ಯಕೃತ್) ಸಿರೋಸಿಸ್ ಕಾಯಿಲೆ ಉಲ್ಬಣಿಸಿ ಸಾವನ್ನಪ್ಪಿದ್ದಾರೆ ಎಂದು ಅಂತಿಮ ಷರಾ ಬರೆಯಲಾಗಿದೆ. ಇದು ಎಲ್ಲ ಅನುಮಾನಗಳಿಗೆ ಅಂತ್ಯ ಹಾಡಲಿದೆ. ಇನ್ನು ಮರಣೋತ್ತರ ಪರೀಕ್ಷೆ ಬಂದಿದ್ದರೂ ಎಫ್ಎಸ್ಎಲ್ ವರದಿ ಬಳಿಕವಷ್ಟೆ ಅಂತಿಮ ತೀರ್ಮಾನ ಸಾಧ್ಯ ಎನ್ನುವುದು ಪೊಲೀಸರ ವಾದವಾಗಿತ್ತು. ವೈದ್ಯರು ಕೂಡ ಪ್ರಾಥಮಿಕ ವರದಿಯಲ್ಲಿ ಅದನ್ನೇ ಪ್ರತಿಪಾದಿಸಿದ್ದರು.
ಇನ್ನು ಕಳೆದ ವಾರ ಬಂದಿದ್ದ ಎಫ್ಎಸ್ಎಲ್ ವರದಿ ಮತ್ತು ಮರಣೋತ್ತರ ಪರೀಕ್ಷೆ ವರದಿ ಎರಡನ್ನು ತಾಳೆ ಹಾಕಿರುವ ವೈದ್ಯರು ಸ್ವಾಮೀಜಿ ಲಿವರ್ ಸಿರೋಸಿಸ್ ಕಾಯಿಲೆಯಿಂದ ಮೃತರಾಗಿರುವುದನ್ನು ದೃಢಪಡಿಸಿದ್ದಾರೆ. ಎರಡೂ ವರದಿಗಳಲ್ಲಿ ಎಲ್ಲಿಯೂ ವಿಷ ಕುರಿತಂತೆ ಪ್ರಸ್ತಾಪವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
natural deathಉಡುಪಿudupiಲಕ್ಷ್ಮೀವರ ತೀರ್ಥ ಸ್ವಾಮೀಜಿಶಿರೂರು ಶ್ರೀShiroor ShreeLakshmivara Tirtha Swamijiಸಹಜ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


