ಮಾಜಿ ಶಾಸಕ ವೈ ಎಸ್ ವಿ ದತ್ತಾ ಪತ್ನಿ ನಿರ್ಮಲಾ ದತ್ತ ನಿಧನ
ಜೆಡಿಎಸ್ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ನಿನ್ನೆ ...

ಬೆಂಗಳೂರು: ಜೆಡಿಎಸ್ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ನಿನ್ನೆ ನಿಧನರಾಗಿದ್ದು, ಇಂದು ರಾಜಾಜಿನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಇಂದು ಸಂಜೆ ಅವರ ಊರು ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ನಿರ್ಮಲಾ ಅವರು ಪತಿ ಮಾಜಿ ಶಾಸಕ ವೈ ಎಸ್ ವಿ ದತ್ತ ಹಾಗೂ ಪುತ್ರಿ ಶ್ರೀದೇವಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು ದತ್ತ ಅವರ ಚುನಾವಣೆ ಸಂದರ್ಭ ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ಬಾರಿಯೂ ತಮ್ಮ ಅನಾರೋಗ್ಯದ ನಡುವೆಯೂ ದತ್ತ ಅವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತದಾನ ಕೂಡ ಚಲಾಯಿಸಿದ್ದರು.
ನಿರ್ಮಲಾ ನಿಧನ ಸುದ್ದಿ ಗೊತ್ತಾಗುತ್ತಿದ್ದಂತೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ತೆರೆಳಿ ಅಂತಿಮ ದರ್ಶನ ಪಡೆದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


