ರಾಜ್ಯ

ಸಿಎಂ ಕುಮಾರಸ್ವಾಮಿ ಆಪ್ತರ ಮನೆ ಮೇಲೆ ಐಟಿ ರೇಡ್, ಮಹತ್ವದ ದಾಖಲೆಗಳ ವಶ

ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ, ಅವರ ಎಲ್ಲಾ ವ್ಯವಹಾರಗಳ ಆಡಿಟ್ ನಡೆಸುವ ಚಾರ್ಟರ್ ಅಕೌಂಟೆಂಟ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿಎಂ  ಕುಮಾರಸ್ವಾಮಿ ಆಪ್ತರ ಮನೆ ಮೇಲೆ ಐಟಿ ರೇಡ್, ಮಹತ್ವದ ದಾಖಲೆಗಳ ವಶ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ, ಅವರ ಎಲ್ಲಾ ವ್ಯವಹಾರಗಳ ಆಡಿಟ್ ನಡೆಸುವ ಚಾರ್ಟರ್ ಅಕೌಂಟೆಂಟ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು ಕೆಲ ಮಹತ್ವದ ಕಡತಗಳ ವಶಕ್ಕೆ ಪಡೆದಿದ್ದಲ್ಲದೆ ವಿಧಾನಸೌಧ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.
ಮುಖ್ಯಮಂತ್ರಿಗಳ ಲೆಕ್ಕ ಪರಿಶೋಧಕರಾದ ಎಚ್‌.ಬಿ.ಸುನಿಲ್ ಅವರ ಮನೆ, ಕಛೇರಿಯ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ  ಸುನೀಲ್ ಅವರ ಜೆ.ಪಿನಗರದ ಮನೆ, ಗುಟ್ಟಹಳ್ಳಿಯ ಕಛೇರಿಗಳ ಮೇಲೆ ಗುರುವಾರ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಸಿಎ ಸುನೀಲ್ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರರ ಲೆಕ್ಕ ಪತ್ರ ವ್ಯವಹಾರ ಸಹ ನಿಬಾಯಿಸುತ್ತಿದ್ದಾರೆ. ಇದರೋಡನೆ ಹಲವು ರಾಜಕಾರಣಿಗಳು, ಸಿನಿಮಾ ರಂಗದ ಗಣ್ಯರು, ಉದ್ಯಮಿಗಳ ದಾಖಲೆಗಳನ್ನು ಸಹ ನೋಡಿಕೊಳ್ಳುವ ಕೆಲಸ ನಿರ್ವಹಿಸುತ್ತಿದ್ದರು.
ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ, ಸಿಎ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿರುವುದು ಅವರ ಆಪ್ತರಲ್ಲಿ ಆತಂಕವನ್ನುಂಟು ಮಾಡಿದೆ. ಹಲವು ಸಚಿವರು, ಆಪ್ತರು ಕುಮಾರಸ್ವಾಮಿ ಅವರೊಡನೆ ಈ ವಿಚಾರ ಪ್ರಸ್ತಾಪಿಸಿದ್ದು ಕೆಲವರು ತಮ್ಮ ಅಸಮಾಧಾನ ಸಹ ಹೊರಹಾಕಿದ್ದಾರೆ.=

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.