ವಾಜಪೇಯಿ ಚಿತಾಭಸ್ಮವನ್ನು ಕಾವೇರಿ ನದಿಗೆ ವಿಸರ್ಜಿಸಿದ ಯಡಿಯೂರಪ್ಪ
ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಕಾವೇರಿ ನದಿಯ ಪಶ್ಚಿಮವಾಹಿನಿಯಲ್ಲಿ ವಿಸರ್ಜಿಸಲಾಗಿದೆ.

Published On :
ಮಂಡ್ಯ: ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅನಂತಕುಮಾರ್, ಆರ್. ಅಶೋಕ್ ಇನ್ನೂ ಮೊದಲಾದವರು ಗುರುವಾರ ಶ್ರೀರಂಗಪಟ್ಟಣದಲ್ಲಿನ ಕಾವೇರಿ ತೀರದಲ್ಲಿ ನೆರೆದಿದ್ದು ಸಕಲ ಪೂಜಾ ಕೈಂಕರ್ಯ ನೆರವೇರಿಸಿದ್ದಾರೆ.
ಶ್ರೀರಂಗಪಟ್ಟಣ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಮುಂದಾಳತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು.
ಇದಕ್ಕೆ ಮುನ್ನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿತಾಭಸ್ಮವಿದ್ದ ಕಳಶದ ಮೆರವಣಿಗೆ ನಡೆದಿದೆ. ಮಾರ್ಗದ ನಡುವೆ ನಿಡಘಟ್ಟ, ಮದ್ದೂರು, ಮಂಡ್ಯ ನಗರಗಳಲ್ಲಿ ವಾಜಪೇಯಿ ಅವರ ಚಿತಾಭಸ್ಮದ ಕಳಶಕ್ಕೆ ಪುಷ್ಪಾರ್ಚನೆ ಸಹ ನೆರವೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


