ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದ ಸಿಐಡಿ
ಸಂಶೋಧಕ ಡಾ. ಎಂ. ಎಂ. ಕಲಬುರಗಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲು ನ್ಯಾಯಾಲಯದ ಅನುಮತಿ ಪಡೆದುಕೊಂಡಿದೆ.

ಬೆಂಗಳೂರು:ಸಂಶೋಧಕ ಡಾ. ಎಂ. ಎಂ. ಕಲಬುರಗಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲು ನ್ಯಾಯಾಲಯದ ಅನುಮತಿ ಪಡೆದುಕೊಂಡಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ಡಾ. ಕಲಬುರಗಿ ಹತ್ಯೆ ವಿಚಾರದಲ್ಲಿ ಹೊಸ ಪಾತ್ರಗಳು ಬೆಳಕಿಗೆ ಬಂದಿದ್ದವು. ಅವರ ಹತ್ಯೆಗೆ ಸಂಬಂಧಿಸಿದ ಮಾಹಿತಿಗಳನ್ನು ಎಸ್ ಐಟಿ ಸಿಐಡಿಗೆ ಹಂಚಿಕೆ ಮಾಡಿತ್ತು.ಈ ಹಿನ್ನೆಲೆಯಲ್ಲಿ ಆರೋಪಿಗಳ ವಿಚಾರಣೆಗೆ ಸಿಐಡಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿತ್ತು.
ಡಾ. ಕಲಬುರಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳಾದ ಅಮೊಲ್ ಕಾಳೆ, ಅಮಿತ್ ದೇಗ್ವಿಕರ್, ಸುಜಿತ್ ಕುಮಾರ್, ಗಣೇಶ್ ಮಿಸ್ಕಿನ್ ಮತ್ತು ರಾಜೇಶ್ ಡಿ. ಬಂಗೇರಾ ಅವರನ್ನು ಆಗಸ್ಟ್ 27 ರಿಂದ 31 ರವರೆಗೂ ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.
ಭರತ್ ಕುರ್ನೆ ನ್ಯಾಯಾಂಗ ಬಂಧನಕ್ಕೆ
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಭರತ್ ಕುರ್ನೆಯನ್ನು ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಒಪ್ಪಿಸಿದೆ. ಗುರುವಾರ ಆತನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಕಸ್ಟಡಿ ಅವಧಿ ವಿಸ್ತರಿಸುವಂತೆ ಎಸ್ ಐಟಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆದಾಗ್ಯೂ, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


